ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ!

ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬುವವರು ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Vidhana Soudha
ವಿಧಾನ ಸೌಧ
Updated on

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ಮಂಗಳವಾರ ಮಧ್ಯಾಹ್ನ ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ರೈತನ ಜೀವ ಉಳಿದಿದೆ.

ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬುವವರು ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ ವಿಧಾನಸೌಧ ಆವರಣದಲ್ಲಿರುವ ಮರವನ್ನು ಕಡಿಯಲು ಈ ಹಿಂದೆ 2025ರಲ್ಲಿ ಪ್ರಯತ್ನಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಮಂಗಳವಾರ, ಅವರು ಮತ್ತೊಮ್ಮೆ ಅದೇ ಮರದ ಬಳಿಗೆ ತಲುಪಿ ಹಸಿರು ಸ್ಕಾರ್ಫ್ ಬಳಸಿ ನೇಣು ಬಿಗಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಅಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಅವರ ಚಟುವಟಿಕೆಗಳನ್ನು ಗಮನಿಸಿದ ತಕ್ಷಣ, ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು.

Vidhana Soudha
ಡಿ.ಕೆ ಶಿವಕುಮಾರ್ ಹೇಳುತ್ತಿರುವುದು ಸುಳ್ಳು, ಬಿಡದಿ ಯೋಜನೆಗೆ ನಮ್ಮ ಬೆಂಬಲ ಇಲ್ಲ: ರೈತ ಸಂಘಟನೆ

'ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ' ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com