

ಬೆಂಗಳೂರು: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. ಚಿಕ್ಕಬಾಣಾವರದ ರುದ್ರಮ್ಮ ಲೇಔಟ್‌ನಲ್ಲಿರುವ ಮನೆಯ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದ್ದು, ಅಲ್ಲಿ ವೇಶ್ಯಾವಾಟಿಕೆಯ ಉದ್ದೇಶಕ್ಕಾಗಿ ಮಹಿಳೆಯರನ್ನು ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಥವಾ ಪ್ರೇರೇಪಿಸಿದ ಆರೋಪದ ಮೇಲೆ ಒಬ್ಬ ಮಹಿಳೆಯನ್ನು ವಶಕ್ಕೆ ಪಡೆಯಲಾಯಿತು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇತರ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್ಚಿನ ಹಣವನ್ನು ಗಳಿಸುವ ಉದ್ದೇಶದಿಂದ ಹೆಂಗಸರ ಸಂಗ ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಅವರನ್ನು ಮನೆಗೆ ಕರೆಯಿಸಿ, ಅಲ್ಲಿ ವೇಶ್ಯಾವಾಟಿಕೆ ಚಟುವಟಿಕೆ ನಡೆಸಲಾಗುತಿತ್ತು ಎಂದು ಆರೋಪಿ ಮಹಿಳೆ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement