

ಬೆಂಗಳೂರು: ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಸಚಿವ ಯುಟಿ ಖಾದರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ದಶಕಗಳಿಂದ ಕಾಡುತ್ತಿರುವ ವೈದ್ಯರ ಕೊರತೆ ನೀಗಿಸಲು ಸಚಿವರು ಮೊದಲ ಪ್ರಗತಿ ಪರಿಶೀಲನಾ ಸಭೆಯಲ್ಲೇ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ.
ಅದರಂತೆ ಹಲವು ವರ್ಷಗಳಿಂದ ಕನಿಷ್ಠ ವೇತನಕ್ಕೆ ಕೆಲಸ ಮಾಡುತ್ತಿರುವ ಗುತ್ತಿಗೆ ವೈದ್ಯರಿಗೆ ಸಚಿವರು ಬಂಪರ್ ಕೊಡುಗೆ ನೀಡಿದ್ದಾರೆ. 5 ವರ್ಷ ಸೇವೆ ಪೂರ್ಣಗೊಳಿಸಿರುವ ಮತ್ತು ಉತ್ತಮ ಕೆಲಸ ಮಾಡಿರುವ ಗುತ್ತಿಗೆ ನೌಕರರನ್ನು ಹಂತಹಂತವಾಗಿ ಖಾಯಂಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದರ ಭಾಗವಾಗಿ 200 ವೈದ್ಯರನ್ನು ಕೆಇಎ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿ ವಾರದೊಳಗೆ ಆದೇಶ ಪತ್ರ ನೀಡಲು ನಿರ್ಧರಿಸಲಾಗಿದ್ದು, ಇದಕ್ಕೆ ಆರ್ಥಿಕ ಇಲಾಖೆಯ ಒಪ್ಪಿಗೆಯೂ ಸಿಕ್ಕಿದೆ.
ರಾಜ್ಯದಲ್ಲಿ 1280 ವೈದ್ಯರು, 924 ತಜ್ಞ ವೈದ್ಯರು ಹಾಗೂ 892 ನರ್ಸ್‌ಗಳ ಕೊರತೆ ಇದೆ. ಇದನ್ನು ಸರಿಪಡಿಸಲು Walk-in Interview ಮೂಲಕ ತಕ್ಷಣದ ನೇಮಕಾತಿಗೆ ಸಚಿವರು ಚಾಲನೆ ನೀಡಿದ್ದಾರೆ. ಇನ್ನು ಕೆಇಎ ಮೂಲಕವೇ 400 ನರ್ಸ್‌ಗಳು, 400 ಫಾರ್ಮಸಿಸ್ಟ್‌ಗಳು ಹಾಗೂ 400 ಲ್ಯಾಬ್ ಟೆಕ್ನಿಷಿಯನ್‌ಗಳನ್ನು ಖಾಯಂ ಆಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement