BCM ಗರ್ಲ್ಸ್ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಎಣ್ಣೆ ಪಾರ್ಟಿ: ವಿದ್ಯಾರ್ಥಿನಿಯರ ದುರ್ಬಳಕೆ ಆರೋಪ; ವಿಡಿಯೋ ವೈರಲ್

ಎರಡು ದಿನಗಳ ಹಿಂದಷ್ಟೇ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ಅಪ್ರಾಪ್ತರಿಗೆ ಪಬ್ ಮತ್ತು ಬಾರ್ ಗಳಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ತವರು ಜಿಲ್ಲೆಯಲ್ಲಿ ಅಪ್ರಾಪ್ತರಿರುವ ಹಾಸ್ಟೆಲ್​​​​​ನಲ್ಲೇ ಎಣ್ಣೆ ಪಾರ್ಟಿ ನಡೆದಿದೆ.
Alcohol party at BCM ladies hostel in Kalaburagi, video goes viral
ಹುಡುಗ-ಹುಡುಗಿಯರಿಂದ ಎಣ್ಣೆ ಪಾರ್ಟಿ
Updated on

ಕಲಬುರಗಿ: ಕಲಬುರಗಿಯಲ್ಲಿರುವ ರಾಜ್ಯ ಸರ್ಕಾರದ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಹುಡುಗ ಹಾಗೂ ಹುಡುಗಿಯರು ಬಿಂದಾಸ್ ಆಗಿ ಮಧ್ಯ ಸೇವೆನೆ ಪಾರ್ಟಿ ಮಾಡಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಮಹಿಳಾ ಹಾಸ್ಟೆಲ್​​​​​ನಲ್ಲೇ ನಡೆದ ಈ ಮಧ್ಯದ ಪಾರ್ಟಿಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದರು ನಿರ್ಲಕ್ಷ್ಯಸಿದ್ದಾರೆ ಎಂದು ಆರೋಪಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ಅಪ್ರಾಪ್ತರಿಗೆ ಪಬ್ ಮತ್ತು ಬಾರ್ ಗಳಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ತವರು ಜಿಲ್ಲೆಯಲ್ಲಿ ಅಪ್ರಾಪ್ತರಿರುವ ಹಾಸ್ಟೆಲ್​​​​​ನಲ್ಲೇ ಎಣ್ಣೆ ಪಾರ್ಟಿ ನಡೆದಿದೆ.

Alcohol party at BCM ladies hostel in Kalaburagi, video goes viral
ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಗೃಹ ಸಚಿವ ಖರ್ಗೆ ಖಡಕ್ ಸೂಚನೆ; ಇಲ್ಲಿದೆ ಕಾರಣ

ಹೌದು… ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಿಸಿಎಂ ಹಾಸ್ಟೆಲ್ ನದ್ದು ಎನ್ನಲಾಗುತ್ತಿರೋ ಈ ವಿಡಿಯೋ ಭಾರೀ ವೈರಲ್ ಆಗಿದೆ.

ಇನ್ನು ವಿದ್ಯಾರ್ಥಿನಿ ಬೀಯರ್ ಕುಡಿಯುತ್ತಿರೋ ದೃಶ್ಯ ವಿಡಿಯೋದಲ್ಲಿದ್ದು, ಇದನ್ನೇ ವಾರ್ಡನ್ ಬಂಡವಾಳ ಮಾಡಿಕೊಂಡಿಕೊಂಡಿದ್ದು, ಪ್ರಕರಣ ಮುಚ್ಚಿಹಾಕಲು ಹಣ ವಸೂಲಿಗೆ ಇಳಿದಿದ್ದಾರೆ. ಅಲ್ಲದೇ ಮೂರ್ನಾಲ್ಕು ವಾರ್ಡನ್​​ಗಳು, ವಿದ್ಯಾರ್ಥಿನಿಯರನ್ನು ದುರ್ಬಳಿಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಸಹ ಕೇಳಿಬಂದಿದೆ.

ಇನ್ನು ವಾರ್ಡನ್ ಹಾಗೂ ವಿದ್ಯಾರ್ಥಿನಿಯ ಆಡಿಯೋ ಕೂಡಾ ವೈರಲ್ ಆಗಿದೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com