ಬೀದರ್: ಕಸಗುಡಿಸುವಂತೆ ಹೆಡ್ ಮಾಸ್ಟರ್ ಕಿರುಕುಳ; ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಪೋಷಕರಿಗೆ ಹೇಳದೇ ವಿದ್ಯಾರ್ಥಿಯ ಮೃತದೇಹವನ್ನು ಶಾಲೆಯ ಆಡಳಿತ ಮಂಡಳಿ ಬ್ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.
Sameer
ವಿದ್ಯಾರ್ಥಿ ಸಮೀರ್
Updated on

ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನ ಪ್ರತಾಪ್ ನಗರದ ಬಳಿ ನಡೆದಿದೆ.

ಶಾಂತಿನಗರದ ನಿವಾಸಿ ಸಮೀರ್(15) ಮೃತ ಬಾಲಕನಾಗಿದ್ದು, ಶಾಲೆಯಲ್ಲಿ ಈತ SSLC ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಸ್ಕೂಲ್‌ಗೆ ಹೋಗಿ ನಾಲ್ಕನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಪೋಷಕರಿಗೆ ಹೇಳದೇ ವಿದ್ಯಾರ್ಥಿಯ ಮೃತದೇಹವನ್ನು ಶಾಲೆಯ ಆಡಳಿತ ಮಂಡಳಿ ಬ್ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ.

ಹೇಳದೇ ಕೇಳದೇ ಆಸ್ಪತ್ರೆಗೆ ರವಾನಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1ನೇ ತರಗತಿಯಿಂದಲೂ ಇದೇ ಶಾಲೆಯಲ್ಲಿ ಓದುತ್ತಿದ್ದ. ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು, ಶಾಲೆಯಲ್ಲಿ ಕಸ ಗುಡಿಸುವ ಕೆಲಸ ಮಾಡಬೇಕು ಎಂದು ಮುಖ್ಯ ಶಿಕ್ಷಕರು ಕಿರುಕುಳ ನೀಡಿದ್ದಾರೆ. ಹೀಗಾಗಿ ಕಿರುಕುಳದಿಂದ ಬೇಸತ್ತು ಸಾವನ್ನಪ್ಪಿದ್ದಾನೆಂದು ಮೃತ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.

Sameer
2 ಕೋಟಿ ರೂ ವಾಪಸ್ ಕೇಳಿದ್ದಕ್ಕೆ ಬೆದರಿಕೆ: ಮನನೊಂದು ಬಿಯರ್'ಗೆ ವಿಷ ಬೆರೆಸಿ ಕುಡಿದು ವ್ಯಕ್ತಿ ಆತ್ಮಹತ್ಯೆ..!

ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ನಾವು ಬಾಲಕನಿಗೆ ಕೇವಲ ಓದುವಂತೆ ಹೇಳಿದ್ದೇವೆಯೇ ಹೊರತು ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com