ಸಚಿವ ಸ್ಥಾನ ಗಿಟ್ಟಿಸಲು ದೇವಸ್ಥಾನಗಳಲ್ಲಿ ದೀಡು ನಮಸ್ಕಾರ, ಉರುಳು ಸೇವೆ: ಶಾಸಕರ ಪರ ಕಾಂಗ್ರೆಸ್ ಕಾರ್ಯಕರ್ತರ ಹರಕೆ!

ಸಚಿವ ಸ್ಥಾನ ಪಡೆಯಲು ದೇವಾಲಯ ಪ್ರದಕ್ಷಿಣೆ, ದೀಡು ನಮಸ್ಕಾರ, ಉರುಳು ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಪ್ರವೃತ್ತಿ ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ.
A supporter of CM DK Shivakumar performs urulu seve from Anand Rao Circle to Annamma Devi Temple in Bengaluru
ಬೆಂಗಳೂರಿನ ಆನಂದರಾವ್ ವೃತ್ತದಿಂದ ಅಣ್ಣಮ್ಮ ದೇವಿ ದೇವಸ್ಥಾನವರೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಉರುಳು ಸೇವೆ ನೆರವೇರಿಸಿದರು.
Updated on

ಗದಗ: ಡಿ ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಖಾತೆ ಭಾರೀ ಸದ್ದು ಮಾಡುತ್ತಿದೆ. ಸಚಿವ ಸ್ಥಾನ ಸಿಕ್ಕವರಲ್ಲಿ ಕೆಲವರು ತಮ್ಮ ಖಾತೆ ಬಗ್ಗೆ ಖ್ಯಾತೆ ತೆಗೆದಿದ್ದಾರೆ. ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧಾನವಿದೆ.

ಸಚಿವ ಸ್ಥಾನ ಪಡೆಯಲು ದೇವಾಲಯ ಪ್ರದಕ್ಷಿಣೆ, ದೀಡು ನಮಸ್ಕಾರ, ಉರುಳು ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಪ್ರವೃತ್ತಿ ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ. ತಮ್ಮ ಶಾಸಕರಿಗೆ ಸಚಿವ ಸ್ಥಾನ ದೊರಕಿಸಿಕೊಡಲು ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆಯಲು ಹರಸಾಹಸ ಪಡುತ್ತಿದ್ದಾರೆ.

A supporter of CM DK Shivakumar performs urulu seve from Anand Rao Circle to Annamma Devi Temple in Bengaluru
'ಎಲ್ಲಾ ಸಚಿವರೂ ಸಶಕ್ತರೇ, ನಾನು ಟೆಸ್ಟ್ ಮ್ಯಾಚ್ ಆಡಿದರೆ ಅವರು ಒನ್ ಡೇ ಮ್ಯಾಚ್ ಆಡುತ್ತಾರೆ': ಯು.ಟಿ ಖಾದರ್

ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರ ಬೆಂಬಲಿಗರು ಇತ್ತೀಚೆಗೆ ಗದಗ ನಗರದಲ್ಲಿ ಒಂದು ಕಿಲೋಮೀಟರ್‌ಗಿಂತ ಹೆಚ್ಚು ದೂರ ದೀಡು ನಮಸ್ಕಾರ ನೆರವೇರಿಸಿದರು. ಹೆಚ್.ಕೆ. ಪಾಟೀಲ್ ಅವರ ಬೆಂಬಲಿಗರೂ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ-ಪುನಸ್ಕಾರಗಳಲ್ಲಿ ತೊಡಗಿದ್ದಾರೆ.

ಸಚಿವ ಸಂಪುಟದ ಮೊದಲ ಹಂತದ ರಚನೆಯಲ್ಲಿ ಹೆಚ್.ಕೆ. ಪಾಟೀಲ್ ಅವರನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಕ್ಷದಲ್ಲಿ ಹಾಗೂ ಸರ್ಕಾರದಲ್ಲಿ ಹಲವು ಪ್ರಮುಖ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಜವಾಬ್ದಾರಿಗಳನ್ನು ನಿರ್ವಹಿಸಿರುವ ಹಿರಿಯ ನಾಯಕ ಹೆಚ್.ಕೆ. ಪಾಟೀಲ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ಜಿ.ಎಸ್. ಪಾಟೀಲ್ ಅವರು ರೋಣ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಅವರ ಬೆಂಬಲಿಗರು ದಶಕಕ್ಕೂ ಹೆಚ್ಚು ಕಾಲದಿಂದ ಮುಂದಿಟ್ಟಿದ್ದಾರೆ.

ಈ ಬಾರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಗದಗದ ಭೂಮರೆಡ್ಡಿ ವೃತ್ತದಿಂದ ವೀರೇಶ್ವರ ಪುಣ್ಯಾಶ್ರಮದವರೆಗೆ ರ್ಯಾಲಿ ನಡೆಸಿದರು. ರ್ಯಾಲಿಯ ವೇಳೆ ಅನೇಕ ಬೆಂಬಲಿಗರು ದೀಡು ನಮಸ್ಕಾರ, ಉರುಳು ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.

ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಸಚಿವ ಶಿವರಾಜ ತಂಗಡಗಿ ಅವರ ಬೆಂಬಲಿಗರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮಾಜಿ ಸಚಿವರ ಬೆಂಬಲಿಗರು ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಇತರ ಶಾಸಕರ ಬೆಂಬಲಿಗರು ಕೂಡ ತಮ್ಮ ನಾಯಕರಿಗೆ ಸಚಿವಾಲಯಗಳ ಜವಾಬ್ದಾರಿ ವಹಿಸುವ ಅವಕಾಶ ನೀಡುವ ಸಮಯ ಬಂದಿದೆ ಎಂದು ಹೇಳುತ್ತಿದ್ದಾರೆ.

ಪ್ರತಿಭಟನಾಕಾರರ ಪ್ರಕಾರ, ಪ್ರಸ್ತುತ ಸಚಿವ ಸಂಪುಟದಲ್ಲಿ ಅವಿಭಜಿತ ಧಾರವಾಡ ಜಿಲ್ಲೆಯಿಂದ ಯಾವುದೇ ಸಚಿವರಿಲ್ಲ. ಈಗ ಉತ್ತರ ಕರ್ನಾಟಕದ ಶಾಸಕರು ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದ ಘೋಷಣೆಯನ್ನು ಎದುರು ನೋಡುತ್ತಿದ್ದು, ತಮ್ಮ ಹೆಸರುಗಳು ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿವೆ ಎಂಬ ನಿರೀಕ್ಷೆಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com