ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಗೆ ಚಾಲನೆ: ಪಾಸ್ ಪಡೆಯಲು ಇರುವ ನಿಯಮಗಳೇನು?

ಈ ಸಂಬಂಧ ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
File image
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಹಾಗೂ ಐತಿಹಾಸಿಕ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

ಈ ಸಂಬಂಧ ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಇರುವುದರಿಂದ ಹೆಣ್ಣು ಮಕ್ಕಳು ಪ್ರತ್ಯೇಕವಾಗಿ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ. ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಈ ನೂತನ ಉಚಿತ ಬಸ್ ಪಾಸ್ ಸೌಲಭ್ಯವು ಕೇವಲ ಗಂಡು ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ಅನ್ವಯಿಸಲಿದ್ದು, ಅವರು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಪಾಸ್ಪ ಡೆದುಕೊಳ್ಳಬೇಕಾಗುತ್ತದೆ.

ಇನ್ನು ಈಗಾಗಲೇ ಹಣ ನೀಡಿ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಮುಂದಿನ 15 ದಿನಗಳಲ್ಲಿ ಹಣ ಮರುಪಾವತಿ (Refund) ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.

File image
ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶ ಹೊರಡಿಸಿದ ಸರ್ಕಾರ!

ವಿದ್ಯಾರ್ಥಿಗಳು ಉಚಿತ ಪಾಸ್ ಪಡೆಯಲು ತಮ್ಮ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಅಗತ್ಯ ಮಾನದಂಡ ಹಾಗೂ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕು. ವಿದ್ಯಾರ್ಥಿ ವಾಸಿಸುವ ಸ್ಥಳದಿಂದ ವಿದ್ಯಾಸಂಸ್ಥೆಗೆ ಸಂಚರಿಸುವ ನಿಗದಿತ ದೂರದ ಮಿತಿಗೆ ಅನುಗುಣವಾಗಿ ಪಾಸ್ ನೀಡಲಾಗುತ್ತದೆ.

ವಿದ್ಯಾರ್ಥಿಯ ಪ್ರಸ್ತುತ ಶೈಕ್ಷಣಿಕ ವರ್ಷದ ಅವಧಿಗೆ ಅನುಸಾರವಾಗಿ ಈ ಪಾಸಿನ ಕಾಲಾವಧಿಯನ್ನು ನಿಗದಿಪಡಿಸಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ ಆನ್‌ಲೈನ್‌ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಯ ಆಧಾರ್ ಕಾರ್ಡ್

ಶಾಲಾ/ಕಾಲೇಜು ಪ್ರವೇಶಾತಿ ರಶೀದಿ

ವಿದ್ಯಾರ್ಥಿಯ ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಫೋಟೋ ನೀಡಬೇಕು.

ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ, ಆನೇಕಲ್ ಸೇರಿದಂತೆ ಪ್ರಮುಖ ಆರು ಟಿಟಿಎಂಸಿ ಕೇಂದ್ರಗಳಲ್ಲಿ ಹಾಗೂ ರಾಜ್ಯದ ಎಲ್ಲಾ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳು ಭೌತಿಕ ಪಾಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com