ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು, ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್; Video

ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
Tamil Nadu CM Joseph Vijay visits Kollur Mookambika Temple on Friday
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್
Updated on

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ತಮಿಳುನಾಡು ಸಿಎಂ ವಿಜಯ್‌ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಬಳಿಕ ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.

Tamil Nadu CM Joseph Vijay visits Kollur Mookambika Temple on Friday
ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ!

ವಿಜಯ್ ಅವರು ಸಹ ದೇವಸ್ಥಾನದ ಸಂಪ್ರದಾಯದಂತೆ ಶರ್ಟ್ ಬಿಚ್ಚಿ, ಶಲ್ಯ ಧರಿಸಿ ದೇವಸ್ಥಾನ ಪ್ರವೇಶಿಸುವ ಮೂಲಕ ಶಿಷ್ಟಾಚಾರ ಪಾಲನೆ ಮಾಡಿದರು.

ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು.

ಶಕ್ತಿ ದೇವಿಗೆ 1 ಕೆಜಿ 600 ಗ್ರಾಮದ ಬೆಳ್ಳಿ ಖಡ್ಗ, ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್‌ ದೇವಸ್ಥಾನದಿಂದ ಹೊರಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com