ಕಾಡುಗೋಡಿ ಮಗುವಿನ ಸಾವು ಪ್ರಕರಣ: ಕರ್ತವ್ಯ ಲೋಪ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು; ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಲಾಖೆಯ ಉದಾಸೀನತೆ ಹಾಗೂ ಕಾನೂನು ಬಾಹಿರ ನಡೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವರು ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ.
Accused Priyanka and Her Lover
ಆರೋಪಿಗಳಾದ ಪ್ರಿಯಾಂಕಾ, ಆಕೆಯ ಲವರ್ ಜೊತೆಗೆ ಸಾವನ್ನಪ್ಪಿದ್ದ ಮಗುವಿನ ಚಿತ್ರ
Updated on

ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಗುವಿನ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಮತ್ತು ಕಾನೂನು ನಿಯಮಗಳನ್ನು ಉಲ್ಲಂಘಿಸಿದ ಮೂವರು ಪೊಲೀಸ್ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಅಧಿಕೃತ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಇಲಾಖೆಯ ಉದಾಸೀನತೆ ಹಾಗೂ ಕಾನೂನು ಬಾಹಿರ ನಡೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ.

ಕಳೆದ ಏಪ್ರಿಲ್ 4 ರಂದೇ ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಬಂದಿತ್ತು. ವರದಿಯಲ್ಲಿ ಅದು ಸಾವು ಎಂದು ದೃಢಪಟ್ಟ ತಕ್ಷಣವೇ ಅಧಿಕಾರಿಗಳು ಅದನ್ನು ಅನುಮಾನಾಸ್ಪದ ಸಾವು ಎಂದು ಪರಿಗಣಿಸಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕಾಗಿತ್ತು.

ಆದರೆ, ಕಾನೂನುಬಾಹಿರವಾಗಿ ಈ ಪ್ರಕರಣವನ್ನು ಯುಡಿಆರ್ (UDR - Unnatural Death Report) ವ್ಯಾಪ್ತಿಯಲ್ಲೇ ಇಟ್ಟುಕೊಂಡು, ತಮ್ಮ ಹಂತದಲ್ಲೇ ವಿಳಂಬ ಧೋರಣೆ ಅನುಸರಿಸಿದ್ದಾರೆ. ಇದು ಗಂಭೀರ ಕರ್ತವ್ಯ ಲೋಪ ಎಂದು ಸಚಿವರು ವಿವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಕಾಡುಗೋಡಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹಾಗೂ ರೈಟರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಮೋಹನ್ ಮತ್ತು ಪ್ರಿಯಾಂಕ ಎಂಬುವವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

Accused Priyanka and Her Lover
ಬೆಂಗಳೂರು: Ice cream ಕೇಳಿದ್ದಕ್ಕಾಗಿ ಬಾಲಕಿ ಕೊಲೆ? ತಲೆಮರೆಸಿಕೊಂಡಿದ್ದ ವಕೀಲೆ ಬಂಧನ; ಲಿವ್ ಇನ್ ಪಾರ್ಟ್ನರ್ ಬಿಚ್ಚಿಟ್ಟ ರಹಸ್ಯ!

ತನಿಖೆಯ ಪೂರ್ಣ ವರದಿ ಬಂದ ನಂತರ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com