MBBS ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ; ಶರಣ ಪ್ರಕಾಶ್ ಪಾಟೀಲ್

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ, ಪರೀಕ್ಷೆಯನ್ನು ರದ್ದು ಮಾಡಿದ ಕಾರಣ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಒತ್ತಡಕ್ಕೆ ಒಳಗಾಗಿದ್ದಾರೆ.
Sharana prakash patil
ಶರಣ ಪ್ರಕಾಶ್ ಪಾಟೀಲ್
Updated on

ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕರ್ನಾಟಕ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ, ದಂತ ವೈದ್ಯಕೀಯ, ಪದವಿಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಸ್ತಿತ್ವದಲ್ಲಿರುವ ಶುಲ್ಕವನ್ನು ಹಾಗೆಯೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಶುಲ್ಕ ಹೆಚ್ಚಳದ ಬಗ್ಗೆ ಆತಂಕದಲ್ಲಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ನಿಟ್ಟುಸಿರು ಬಿಡುವಂತೆ ಮಾಡಿದೆ.

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಮಾತನಾಡಿ, ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ, ಪರೀಕ್ಷೆಯನ್ನು ರದ್ದು ಮಾಡಿದ ಕಾರಣ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಒತ್ತಡಕ್ಕೆ ಒಳಗಾಗಿದ್ದಾರೆ.

ಮರುಪರೀಕ್ಷೆ ಬರೆದು ಕಾಲೇಜುಗಳಿಗೆ ಪ್ರವೇಶ ಪಡೆಯುವುದೇ ಅವರಿಗೆ ಸವಾಲಾಗಿದೆ. ಇಂತಹ ಸಮಯದಲ್ಲಿ ಶುಲ್ಕದ ಹೊರೆಯಾಗುವುದು ಬೇಡ ಎನ್ನುವ ಕಾರಣಕ್ಕೆ ಸಮ್ಮತಿಸಲಿಲ್ಲ. ದಂತ ವೈದ್ಯಕೀಯ ಕಾಲೇಜುಗಳ ಶುಲ್ಕ ಹೆಚ್ಚಳ ಬೇಡಿಕೆಯನ್ನೂ ತಿರಸ್ಕರಿಸಲಾಯಿತು ಎಂದರು. ಶುಲ್ಕ ಹೆಚ್ಚಳದ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ, ಖಾಸಗಿ ವೈದ್ಯಕೀಯ ಮತ್ತು ದಂತ ಕಾಲೇಜುಗಳು ಪ್ರಸ್ತಾಪಿಸಿದ ಯಾವುದೇ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿಲ್ಲ ಎಂದು ಪುನರುಚ್ಚರಿಸಿದರು.

Sharana prakash patil
NEET UG re-exam: ಪ್ರಶ್ನೆಪತ್ರಿಕೆ ಸೋರಿಕೆ; ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ MBBS ಕೋರ್ಸ್‌ಗಳಿಗೆ ವಾರ್ಷಿಕ ಬೋಧನಾ ಶುಲ್ಕ 5,000 ರೂ.ಇರುತ್ತದೆ. ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCEF), ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘ (KRLMPCA) ಮತ್ತು ಕರ್ನಾಟಕದ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘ (AMPCK) ಅಡಿಯಲ್ಲಿರುವ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳಿಗೆ, ಶುಲ್ಕವು 1.41 ಲಕ್ಷ ರೂ.ಗಳಲ್ಲಿ ಮುಂದುವರಿಯುತ್ತದೆ. ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳಿಗೆ ಅದೇ ಶುಲ್ಕ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದರು.

ಖಾಸಗಿ ಕೋಟಾ MBBS ಸೀಟುಗಳಿಗೆ, KPCEF, KRLMPCA ಮತ್ತು AMPCK ಗೆ ಸಂಯೋಜಿತವಾಗಿರುವ ಕಾಲೇಜುಗಳಲ್ಲಿ ವಾರ್ಷಿಕ ಶುಲ್ಕ 11.88 ಲಕ್ಷ ರೂ.ಗಳಾಗಿ ಉಳಿಯುತ್ತದೆ. ಅದೇ ರೀತಿ, ಸರ್ಕಾರಿ ಕಾಲೇಜುಗಳಲ್ಲಿ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (BDS) ಕೋರ್ಸ್‌ಗಳ ಶುಲ್ಕ 40,000 ರೂ.ಗಳಲ್ಲಿ ಮುಂದುವರಿಯುತ್ತದೆ.

KPCEF, KRLMPCA ಮತ್ತು AMPCK ಅಡಿಯಲ್ಲಿರುವ ಖಾಸಗಿ ದಂತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳು 83,358 ರೂ.ಗಳ ಶುಲ್ಕವಿರುತ್ತದೆ, ಆದರೆ ಖಾಸಗಿ ಕೋಟಾ ಸೀಟುಗಳು ವರ್ಷಕ್ಕೆ 7.32 ಲಕ್ಷ ರೂ.ಇರುತ್ತದೆ ಎಂದು ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com