ಬೆಂಗಳೂರು: ಅನ್ನಭಾಗ್ಯ ಗೋದಾಮುಗಳಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ತಪಾಸಣೆ; ಅಕ್ರಮ ಪತ್ತೆ

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ದಾಳಿ ನಡೆಸಿದರು.
Upa Lokayukta Justice B Veerappa checks the quality of rice at a godown
ಗೋದಾಮುಗಳಲ್ಲಿ ಲೋಕಾಯುಕ್ತರ ಪರಿಶೀಲನೆ
Updated on

ಬೆಂಗಳೂರು: ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮ ಹಾಗೂ ಕಳ್ಳಾಟವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ಏಕಕಾಲಕ್ಕೆ ಆಹಾರ ಸರಬರಾಜು ನಿಗಮದ ಗೋದಾಮುಗಳ ಮೇಲೆ ಶುಕ್ರವಾರ ಭಾರಿ ದಾಳಿ ನಡೆಸಲಾಗಿದೆ.

ಬೆಂಗಳೂರಿನ 27 ಆಹಾರ ಗೋದಾಮುಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಭಾರಿ ದಾಳಿ ನಡೆಸಿದ್ದಾರೆ.ಸಾವಿರಾರು ಮೂಟೆ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಅಧಿಕಾರಿಗಳ ಭಾರಿ ಕಳ್ಳಾಟ ಬಯಲಾಗಿದೆ. ಗೋದಾಮುಗಳಲ್ಲಿ ಹಮಾಲಿ ಕಾರ್ಮಿಕರಿಗೆ ಜೀವ ವಿಮೆ ಮತ್ತು ಇಎಸ್‌ಐ ನೀಡದೆ ವಂಚಿಸಲಾಗಿದೆ.

ಶಾಂತಿನಗರದ ಗೋದಾಮಿನಲ್ಲಿ ಪರಿಶೀಲನೆ ನಡೆಸಿದಾಗ ದಾಖಲೆಗಳಿಗೂ ಅಲ್ಲಿನ ದಾಸ್ತಾನಿಗೂ ಭಾರಿ ವ್ಯತ್ಯಾಸ ಕಂಡುಬಂದಿದೆ. ಇಲ್ಲಿ 50 ಕೆಜಿಯ ಸುಮಾರು 1,130 ಅಕ್ಕಿ ಮೂಟೆಗಳಿಗೂ ನೀಡಿರುವ ಲೆಕ್ಕಕ್ಕೂ ಸಂಬಂಧವೇ ಇಲ್ಲ. ಈ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಯನ್ನು ಕೇಳಿದರೆ ಅವರ ಬಳಿ ಉತ್ತರವೂ ಇಲ್ಲ.

Upa Lokayukta Justice B Veerappa checks the quality of rice at a godown
ಲೋಕಾಯುಕ್ತ ಮಧ್ಯಪ್ರವೇಶ: ಕಲ್ಲುಗಣಿಯಲ್ಲಿ ಮೃತಪಟ್ಟ ಟಿಪ್ಪರ್ ಚಾಲಕನ ವಿಧವೆ ಪತ್ನಿಗೆ 30 ಲಕ್ಷ ರೂ ಪರಿಹಾರ!

ಬೆಂಗಳೂರು ದಕ್ಷಿಣದ ಬೊಮ್ಮನಹಳ್ಳಿ ಗೋದಾಮಿನ ಮೇಲೆ ಲೋಕಾಯುಕ್ತ ದಾಳಿ ಮಾಡಿದ ವೇಳೆ ಉಸ್ತುವಾರಿ ಅಧಿಕಾರಿ ಅಚ್ಯುತ್ ಯಾವುದೇ ಮಾಹಿತಿ ನೀಡದೆ ಅನಧಿಕೃತವಾಗಿ ಗೈರುಹಾಜರಾಗಿದ್ದರು .

ಬಸವನಗುಡಿ ಗೋದಾಮಿನಲ್ಲಿ ಅಧಿಕಾರಿಗಳು ನೀಡಿದ ಲಿಖಿತ ಲೆಕ್ಕಕ್ಕಿಂತ ಅತ್ಯಂತ ಕಡಿಮೆ ಪ್ರಮಾಣದ ಅಕ್ಕಿ ಮೂಟೆಗಳು ಇರುವುದು ಪತ್ತೆಯಾಗಿದೆ. ಹನುಮಂತನಗರದ ಗೋದಾಮಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ರಿಜಿಸ್ಟರ್ ಹಾಗೂ ದಾಸ್ತಾನು ಪರಿಶೀಲಿಸಿದಾಗ ದೊಡ್ಡ ಮಟ್ಟದ ವಂಚನೆ ಬೆಳಕಿಗೆ ಬಂದಿದೆ.

ಶಾಂತಿನಗರದಲ್ಲಿ, ಜೂನ್ 11 ರಂದು ಪಡೆದ 600 ಚೀಲಗಳಲ್ಲಿ 50 ಕೆಜಿ ಅಕ್ಕಿ ಚೀಲಗಳ 330 ಅಕ್ಕಿ ಚೀಲಗಳ ವಿತರಣೆಯನ್ನು ತೋರಿಸಲು ಅಧಿಕಾರಿಗಳು ದಾಖಲೆಗಳನ್ನು ನಿರ್ವಹಿಸಿಲ್ಲ. ಅಕ್ಕಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಐದು ಕಾರ್ಮಿಕರಿಗೆ ಯಾವುದೇ ವಿಮಾ ಸೌಲಭ್ಯವನ್ನು ಒದಗಿಸಲಾಗಿಲ್ಲ.

ಇದರ ಜೊತೆಗೆ ಇಲ್ಲಿ ಕೆಲಸ ಮಾಡುವ ನಾಲ್ಕು ಜನ ಹಮಾಲಿ ಕಾರ್ಮಿಕರಿಗೂ ಜೀವ ವಿಮೆ, ಇ.ಎಸ್.ಐ ಹಾಗೂ ಪಿ.ಎಫ್ ಸೌಲಭ್ಯಗಳನ್ನು ಒದಗಿಸದೆ ಶೋಷಣೆ ಮಾಡಲಾಗುತ್ತಿತ್ತು ಎಂಬುದು ದಾಳಿ ವೇಳೆ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com