ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಚಲಾಯಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Ricky rai
ರಿಕ್ಕಿ ರೈ
Updated on

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ವಿವಾದ ಸೃಷ್ಟಿಸಿದೆ.

ಕೆಲವೇ ತಿಂಗಳುಗಳ ಹಿಂದೆ ಡ್ರಿಫ್ಟಿಂಗ್ ಮಾಡಿ ಪೊಲೀಸರ ಅತಿಥಿಯಾಗಿದ್ದ ರಿಕ್ಕಿ ರೈ, ಈಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಚಲಾಯಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಕಾರಿನ ಸೈಲೆನ್ಸರ್ ಅನ್ನು ಮಾಡಿಫೈ (ಮಾರ್ಪಾಡು) ಮಾಡಿರುವುದು ಸ್ಪಷ್ಟವಾಗಿ ತಿಳಿದುಬರುತ್ತಿದೆ.

ವೀಡಿಯೋದಲ್ಲಿ ಕಾರಿನ ಸೈಲೆನ್ಸರ್ ಅನ್ನು ಮಾಡಿಫೈ (ಮಾರ್ಪಾಡು) ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದ್ದು, ಕಾರು ವೇಗವಾಗಿ ಚಲಿಸುವಾಗ ಸೈಲೆನ್ಸರ್‌ನಿಂದ ಕರ್ಕಶ ಶಬ್ದದೊಂದಿಗೆ ಬೆಂಕಿ ಉಗುಳುವ ದೃಶ್ಯಗಳು ಸೆರೆಯಾಗಿವೆ. ಈ ಪುಂಡಾಟದ ವೀಡಿಯೋ ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಕಾರು ವೇಗವಾಗಿ ಚಲಿಸುವಾಗ ಸೈಲೆನ್ಸರ್‌ನಿಂದ ಕರ್ಕಶ ಶಬ್ದದೊಂದಿಗೆ ಬೆಂಕಿ ಉಗುಳುವ ದೃಶ್ಯಗಳು ಸೆರೆಯಾಗಿದ್ದು, ಇದು ಇತರ ವಾಹನ ಸವಾರರ ಎದೆಯಲ್ಲಿ ನಡುಕ ಹುಟ್ಟಿಸಿದೆ.

Ricky rai
Lamborghini ಕಾರು ಡ್ರಿಫ್ಟಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್: ರಿಕ್ಕಿ ರೈ ವಿರುದ್ಧ ಮತ್ತೊಂದು FIR; ಸರ್ಕಾರಕ್ಕೇ ವಂಚನೆ ಆರೋಪ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com