

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧದ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಸಂಘದ ನೋಂದಣಿ ಬಗ್ಗೆ ಸ್ಪಷ್ಟನೆ ಕೋರಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್‌ಗೆ ಬರೆದ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಅದಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಧ್ಯಗಳಲ್ಲಿ ವರದಿಯಾಗಿತ್ತು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿಡಿಯೋ ಸಹ ವೈರಲ್ ಆಗಿತ್ತು.
ಭಾಗವತ್ ಅವರದ್ದು ಎನ್ನಲಾದ ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇದು ಅಸಲಿ ಅಲ್ಲ. ನಕಲಿ ವಿಡಿಯೋ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆರ್‌ಎಸ್‌ಎಸ್‌ಗೆ ಸಾಂಸ್ಕೃತಿಕ ಸಂಘಟನೆಯಾಗುವ ಎಲ್ಲ ಹಕ್ಕಿದೆ. ಅದು ಅವರ ಆಯ್ಕೆ. ಆದರೆ ಅದು ಏಕಕಾಲದಲ್ಲಿ ಅಗಾಧವಾದ ಸಾಮಾಜಿಕ ಮತ್ತು ರಾಜಕೀಯ ಪ್ರಭಾವವನ್ನು ಚಲಾಯಿಸಲು ಸಾಧ್ಯವಿಲ್ಲ. ಏಕೆಂದರೆ ಅದು ಯಾವುದೇ ರಾಜಕೀಯ ಕಾರ್ಯಸೂಚಿಯನ್ನು ಹೊಂದಿಲ್ಲ. ಆದ್ದರಿಂದ ಸಾರ್ವಜನಿಕ ಹೊಣೆಗಾರಿಕೆಯನ್ನು ಹೊಂದಿಲ್ಲ ಎಂದು ಪದೇ ಪದೇ ಹೇಳುತ್ತಿದೆ. ಬಿಜೆಪಿಯು ಸ್ವತಃ ಆರ್‌ಎಸ್‌ಎಸ್ ಅನ್ನು ತನ್ನ ಸೈದ್ಧಾಂತಿಕ ಪೋಷಕ ಎಂದು ಒಪ್ಪಿಕೊಳ್ಳುತ್ತಿದೆ ಮತ್ತು ಸಾರ್ವಜನಿಕ ಜೀವನದ ಮೇಲೆ ಅದರ ಹಿಡಿತವನ್ನು ನಿರಾಕರಿಸಲಾಗದು ಎಂದು ಹೇಳಿದ್ದಾರೆ.
ಪ್ರಿಯಾಂಕ್ ಪತ್ರಕ್ಕೆ ಮೋಹನ್ ಭಾಗವತ್ ವಿಡಿಯೋ ಪ್ರತಿಕ್ರಿಯೆ
ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರವನ್ನು ರಾಜಕೀಯ ಗಿಮಿಕ್ ಅಂತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಟೀಕಿಸಿದ್ದಾರೆ. ಕೇರಳದ ತ್ರಿಶೂರ್‌ನಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್ ಸಭೆಯಲ್ಲಿ ಮಾತನಾಡಿದ ಭಾಗವತ್, ಆರ್‌ಎಸ್‌ಎಸ್ ಯಾವಾಗಲೂ ಬಹಿರಂಗವಾಗಿ ಕಾರ್ಯನಿರ್ವಹಿಸಿದೆ ಮತ್ತು ಎಂದಿಗೂ ರಹಸ್ಯವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಹೇಳಿದ್ದಾರೆ ಎಂಬ ವಿಡಿಯೋ ವೈರಲ್ ಆಗಿತ್ತು.
Advertisement