'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?: ಡಿಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'

‘ಬಿಡದಿ ಟೌನ್‌ಶಿಪ್ ಯೋಜನೆ‌ಗೆ ರೈತರನ್ನು ಒಕ್ಕಲೆಬ್ಬಿಸುವುದು ನಮ್ಮ ಸರ್ಕಾರದ ಉದ್ದೇಶವಲ್ಲ. ರೈತರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಮುಂದುವರಿಸುತ್ತೇವೆ’ ಎಂದೂ ಹೇಳಿದರು.
Cheluvarayaswamy and hd kumaraswamy
ಚಲುವರಾಯಸ್ವಾಮಿ ಮತ್ತು ಕುಮಾರಸ್ವಾಮಿ
Updated on

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರಿಗೆ 1,400 ಕೋಟಿ ಎಲ್ಲಿಂದ ಉದುರಿತು’ ಎಂದು ಕೇಳುವ ಕುಮಾರಸ್ವಾಮಿ, ಎಚ್.ಡಿ. ದೇವೇಗೌಡರನ್ನು ಬಿಟ್ಟ ತಮ್ಮ ಇಡೀ ಕುಟುಂಬದ ಆಸ್ತಿಯನ್ನು ಘೋಷಣೆ ಮಾಡಲು ಸಿದ್ಧರಿದ್ದಾರಾ’ ಎಂದು ಕಾಂಗ್ರೆಸ್‌ ಶಾಸಕ ಎನ್. ಚಲುವರಾಯಸ್ವಾಮಿ ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಮ್ಮ ಇಡೀ ಜಾತಕ ಶಿವಕುಮಾರ್ ಅವರ ಬಳಿ ಇವೆ. ನೀವು ಇದೇ ರೀತಿ ಮುಂದುವರಿದರೆ ಎಲ್ಲ ದಾಖಲೆಗಳನ್ನು ಅವರು ಹೊರಹಾಕಲಿದ್ದಾರೆ’ ಎಂದು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದರು.

ಜೆಡಿಎಸ್‌ನಲ್ಲಿ ಟಿಕೆಟ್ ಕೊಡಲು ಹಾಗೂ ಇನ್ನೊಬ್ಬರನ್ನು ಸೋಲಿಸಲು ಡಮ್ಮಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಷ್ಟೆಷ್ಟು ಹಣ ‘ಫಿಕ್ಸ್’ ಮಾಡಲಾಗುತ್ತಿತ್ತು ಎಂಬುದು ನನಗೆ ಚೆನ್ನಾಗಿ ಗೊತ್ತು. ಏಕೆಂದರೆ, ನಾನು ಕೂಡ ದೀರ್ಘಕಾಲ ಅವರ ಜೊತೆಯಲ್ಲೇ ಇದ್ದವನು. ಭ್ರಷ್ಟಾಚಾರದ ವಿಚಾರವಾಗಿ ಬಹಿರಂಗ ಚರ್ಚೆಗೆ ನಾನು ಸಿದ್ಧ’ ಎಂದರು.

‘ಬಿಡದಿ ಟೌನ್‌ಶಿಪ್ ಯೋಜನೆ‌ಗೆ ರೈತರನ್ನು ಒಕ್ಕಲೆಬ್ಬಿಸುವುದು ನಮ್ಮ ಸರ್ಕಾರದ ಉದ್ದೇಶವಲ್ಲ. ರೈತರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಮುಂದುವರಿಸುತ್ತೇವೆ’ ಎಂದೂ ಹೇಳಿದರು.

Cheluvarayaswamy and hd kumaraswamy
ಬಿಜೆಪಿ ಸರ್ಕಾರ ಬಿಡದಿಯ 1 ಸಾವಿರ ಎಕರೆ ಭೂಮಿ ಸ್ವಾಧೀನ ಮಾಡಿಕೊಂಡಾಗ ಇವರ್ಯಾಕೆ ಸುಮ್ಮನಿದ್ದರು? ಕುಮಾರಸ್ವಾಮಿ ವಿರುದ್ಧ ಸಿಎಂ DKS ಕಿಡಿ

‘ರಸಗೊಬ್ಬರ ಅಭಾವ ಮತ್ತು ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ವಿರೋಧ ಪಕ್ಷಗಳು ದ್ವಂದ್ವ ರಾಜಕಾರಣ ಮಾಡುತ್ತಿವೆ’ ಎಂದು ವಾಗ್ದಾಳಿ ನಡೆಸಿದರು.

‘ರೈತರಿಗೆ ಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ವಿಪಕ್ಷಗಳು ಇದನ್ನು ದೊಡ್ಡದಾಗಿ ಬಿಂಬಿಸಿ ರೈತರಲ್ಲಿ ಆತಂಕ ಸೃಷ್ಟಿಸಬಾರದು’ ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com