ಮಾವಿನ ಹಣ್ಣು ತಿಂದು ಸಹೋದರಿಯರ ಸಾವು ಕೇಸ್: ಕುಟುಂಬದ ಹೆಣ್ಣು ಮಕ್ಕಳನ್ನು ದತ್ತು ಪಡೆದ ಮಾಜಿ ಸಚಿವ ಪ್ರಭು ಚವ್ಹಾಣ್

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವಿನ ಹಣ್ಣು ತಿಂದು ಸಹೋದರಿಯರು ಸಾವನ್ನಪ್ಪಿದ್ದ ನಂತರ ಕುಟುಂಬ ತೀವ್ರ ಬಡತನದಲ್ಲಿತ್ತು.
prabhu chauhan
ಮಾಜಿ ಸಚಿವ ಪ್ರಭು ಚೌಹಾಣ್online desk
Updated on

ಬೀದರ್: ಮಾವಿನ ಹಣ್ಣು ಸೇವಿಸಿ ಇಬ್ಬರು ಸಹೋದರಿಯರು ಮೃತಪಟ್ಟ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಪ್ರಭು ಚೌಹಾಣ್ ನೆರವಿನ ಹಸ್ತ ಚಾಚಿದ್ದಾರೆ. ಸಹೋದರಿಯರು ಮೃತಪಟ್ಟ ಆ ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವಿನ ಹಣ್ಣು ತಿಂದು ಸಹೋದರಿಯರು ಸಾವನ್ನಪ್ಪಿದ್ದ ನಂತರ ಕುಟುಂಬ ತೀವ್ರ ಬಡತನದಲ್ಲಿತ್ತು. ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌಹಾಣ್ ಮಾನವೀಯತೆಯ ಆಧಾರದ ಮೇಲೆ ಕುಟುಂಬಕ್ಕೆ ತಕ್ಷಣ ಸ್ಪಂದಿಸಿದ್ದಾರೆ.

prabhu chauhan
ಬೀದರ್‌ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!

ದತ್ತು ಪಡೆದಿರುವ ಮೂವರು ಹೆಣ್ಣು ಮಕ್ಕಳ ಸಂಪೂರ್ಣ ಶಿಕ್ಷಣ, ಪಾಲನೆ-ಪೋಷಣೆ ಹಾಗೂ ಭವಿಷ್ಯದ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಪ್ರಭು ಚೌಹಾಣ್ ಭರವಸೆ ನೀಡಿದ್ದಾರೆ.

ಶಾಸಕ ಪ್ರಭು ಚೌಹಾಣ್, ಶೆಂಬೆಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ಹಾಗೂ ಅವರ ಮದುವೆಯ ಜವಾಬ್ದಾರಿಯನ್ನು ತಾವೇ ವೈಯಕ್ತಿಕವಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com