ಧಾರವಾಡ: ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ; ಫೋಟೋಗಳು ವೈರಲ್, ಕರ್ನಾಟಕ ವಿವಿ ಪ್ರಾಧ್ಯಾಪಕ ಅಮಾನತು!

Phd ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ ಎಂಬುವರು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ.
Suspension of Professor
ಪ್ರೊಪೋಸರ್ ಅಮಾನತು
Updated on

ಧಾರವಾಡ: Phd ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ (Devarajan Thangadurai) ಎಂಬುವರು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ.

ವಿಜಯಪುರ ಮೂಲದ ವಿದ್ಯಾರ್ಥಿನಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ಅಲ್ಲದೆ ಮೂರು ಬಾರಿ ಬಲವಂತವಾಗಿ ಗರ್ಭಪಾತ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಇನ್ನು ಈ ವಿಷಯ ಪೋಷಕರಿಗೆ ತಿಳಿದ ಬಳಿಕ ವಿದ್ಯಾರ್ಥಿನಿ ತನ್ನ ಸಂಶೋಧನೆಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಮರಳಿದ್ದಳು. ಈ ಸಂಬಂಧ ಮತ್ತೊಬ್ಬ ಸಂಶೋಧನಾ ವಿದ್ಯಾರ್ಥಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದನು. ಅಲ್ಲದೆ ಸಂಶೋಧನೆ ಪೂರ್ಣಗೊಳಿಸಲು ಸಹಕರಿಸದೇ ವಿದ್ಯಾರ್ಥಿನಿಯನ್ನು ಮತ್ತೆ ಸಂಪರ್ಕಿಸಲು ಪ್ರಾಧ್ಯಾಪಕರು ಒತ್ತಡ ಹೇರಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಕೆಲವು ಆಡಿಯೋ ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳನ್ನೂ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

Suspension of Professor
ಗೃಹ ಸಚಿವರ ಸ್ವಕ್ಷೇತ್ರ ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು PSI ಆತ್ಮಹತ್ಯೆಗೆ ಶರಣು!

ಪ್ರೊಫೆಸರ್ ಸ್ವತಃ ವಿದ್ಯಾರ್ಥಿನಿಯೊಂದಿಗಿನ ಆಪ್ತ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದರು ಎಂಬ ಮಾತುಗಳೂ ಕೇಳಿಬರುತ್ತಿವೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿಶ್ವವಿದ್ಯಾಲಯ ಆಡಳಿತವು ಪ್ರಾಧ್ಯಾಪಕ ದೇವರಾಜನ್ ತಂಗದುರೈ ನನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯ ಮೂಲಗಳು ತಿಳಿಸಿವೆ. ಇದು ಘಟನೆಯ ಗಂಭೀರತೆಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com