

ಶಿವಮೊಗ್ಗ: ಶ್ರೀ ಸತ್ಯಸಂಧಗುರು ಉತ್ತರಾಧಿ ಮಠದಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿದ್ದಾರೆ. ಶಿವಮೊಗ್ಗಯ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ ಉತ್ತರಾಧಿ ಮಠದಲ್ಲಿ ಕಳ್ಳತನವಾಗಿದ್ದು ನಿನ್ನೆ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಶಿವಮೊಗ್ಗದ 25 ವರ್ಷದ ರಾಘವೇಂದ್ರ ಆಚಾರ್ಯ ಎಂಬಾತನನ್ನು ಬಂಧಿಸಿದ್ದು 1 ಕೋಟಿ ರೂ. ಮೌಲ್ಯದ 16 ಹಲಗಾರತಿಗಳನ್ನು ವಶಕ್ಕೆ ಪಡೆದಿದ್ದಾರೆ.
Advertisement