Yoga Day Actor Darshan: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗಾಭ್ಯಾಸ ಮಾಡಿದ ದರ್ಶನ್ ಫೋಟೋ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದವರು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದು, ಫೋಟೋ ಸೋಷಿಯಲ್ ಮೀಡಿಯಾ ತುಂಬಾ ವೈರಲ್ ಆಗಿದೆ.
Actor Darshan doing Yoga in Parappana Agrahara
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗಾಭ್ಯಾಸ ನಿರತ ನಟ ದರ್ಶನ್
Updated on

ಇಂದು ನಟ ದರ್ಶನ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದೆ. ಜೈಲಿನಲ್ಲಿ ಎಲ್ಲಾ ಕೈದಿಗಳಿಂದ ಯೋಗಭ್ಯಾಸ ಮಾಡಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಮುಂತಾದವರು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದು, ಫೋಟೋ ಸೋಷಿಯಲ್ ಮೀಡಿಯಾ ತುಂಬಾ ವೈರಲ್ ಆಗಿದೆ.

ಕಾರಾಗೃಹದ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ತಮಗೆ ತೀವ್ರ ಬೆನ್ನು ನೋವಿನ (Back Pain) ಸಮಸ್ಯೆ ಇದೆ ಎಂದು ಹೇಳಿದ್ದ ನಟ ದರ್ಶನ್, ಆರಂಭದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ನಿರಾಕರಿಸಿದ್ದರು.

Actor Darshan doing Yoga in Parappana Agrahara
ನಟ ದರ್ಶನ್ ಫಾರ್ಮ್‌ಹೌಸ್‌ನಲ್ಲಿ Horse for Sale ಬೋರ್ಡ್‌; ಫ್ಯಾನ್ಸ್ ಶಾಕ್, ಏನಿದು ಹೊಸ ಸುದ್ದಿ..?

ಆಗ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿ ಅಲೋಕ್ ಕುಮಾರ್ (Alok Kumar) ದರ್ಶನ್ ಅವರನ್ನು ಕಚೇರಿಗೆ ಕರೆಸಿ ಮಾತನಾಡಿ ಬೆನ್ನು ನೋವಿನ ಸಮಸ್ಯೆ ಇದ್ದರೆ ಯೋಗ ಮಾಡುವುದರಿಂದಲೇ ಅದು ಗುಣವಾಗುತ್ತದೆ, ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ಮನವರಿಕೆ ಮಾಡಿ ಯೋಗಾಭ್ಯಾಸ ಮಾಡಿಸಿದರು ಎಂದು ತಿಳಿದುಬಂದಿದೆ.

ಡಿಜಿ ಅವರ ಸಲಹೆಯ ಬೆನ್ನಲ್ಲೇ ಯೋಗ ಮಾಡಲು ಒಪ್ಪಿದ ದರ್ಶನ್, ಜೈಲಿನ ಮುಖ್ಯ ಮೈದಾನದ ಸಾಮೂಹಿಕ ಯೋಗಕ್ಕೆ ಬಾರದೇ ಇದ್ದರೂ, ತಮ್ಮ ಬ್ಯಾರಕ್‌ನ ಕಾರಿಡಾರ್‌ನಲ್ಲಿಯೇ ಸಹ-ಆರೋಪಿಗಳೊಂದಿಗೆ ಯೋಗಾಭ್ಯಾಸ ನಡೆಸಿದರು.

Actor Darshan doing Yoga in Parappana Agrahara
'ಜೈಲಿನಲ್ಲಿ ಕ್ರಿಮಿನಲ್ ಗಂಡ, ಬಾಯ್‌ಫ್ರೆಂಡ್ ಜತೆ ಹೆಂಡತಿ ಸುತ್ತಾಟ' ಪೋಸ್ಟ್: ಕೆರಳಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು!

ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಸೆಷನ್‌ನಲ್ಲಿ ದರ್ಶನ್ ಅವರು ಪ್ರಾಣಾಯಾಮ, ದೀರ್ಘದಂಡ ನಮಸ್ಕಾರ ಹಾಗೂ ಶವಾಸನ ಭಂಗಿಗಳನ್ನು ಮಾಡಿದರು. ಯೋಗ ಮುಗಿದ ಬಳಿಕ ದರ್ಶನ್ ಮತ್ತು ಅವರ ಗ್ಯಾಂಗ್ ಮರಳಿ ತಮ್ಮ ಬ್ಯಾರಕ್‌ಗಳಿಗೆ ತೆರಳಿದರು.

ಇದೇ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪವಿತ್ರಾ ಗೌಡ (Pavithra Gowda) ಅವರು ಮಹಿಳಾ ಕೈದಿಗಳ ವಿಭಾಗದಲ್ಲಿ ನಡೆದ ಸಾಮೂಹಿಕ ಯೋಗಾಭ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಜೈಲಿನ ಇತರ ಮಹಿಳಾ ಕೈದಿಗಳ ಜೊತೆ ಸಾಲಿನಲ್ಲಿ ಕುಳಿತು ಪವಿತ್ರಾ ಗೌಡ ಅವರು ಯೋಗ ಮತ್ತು ಧ್ಯಾನ ಮಾಡಿದರು. ಪರಪ್ಪನ ಅಗ್ರಹಾರ ಜೈಲಿನ ಇತಿಹಾಸದಲ್ಲೇ ಹೈಪ್ರೊಫೈಲ್ ಕೈದಿಗಳು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದು ಇದೇ ಮೊದಲು ಎನ್ನಲಾಗಿದೆ.

ಜೈಲು ಅಧಿಕಾರಿಗಳು ಕೈದಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಯೋಗ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಅನೇಕ ಕೈದಿಗಳು ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮ ಅಭ್ಯಾಸಗಳಲ್ಲಿ ಭಾಗವಹಿಸಿದರು.

ದರ್ಶನ್ ಮತ್ತು ಪವಿತ್ರಾ ಗೌಡ ವಿರುದ್ಧದ ಆರೋಪಗಳು ಇನ್ನೂ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com