'ಕೈ' ಪಡೆಗೆ ಹೊಸ ನಾಯಕತ್ವ; KPCC ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕಾರ..!

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್‌ನಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಹರಿಪ್ರಸಾದ್‌ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
BK Hariprasad Takes Charge as KPCC President
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಬಿ.ಕೆ. ಹರಿಪ್ರಸಾದ್.
Updated on

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್‌ನಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಹರಿಪ್ರಸಾದ್‌ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಈ ಮೂಲಕ ಕರ್ನಾಟಕ ಕಾಂಗ್ರೆಸ್ ಸಂಘಟನೆಯ ನೇತೃತ್ವ ಅಧಿಕೃತವಾಗಿ ಹರಿಪ್ರಸಾದ್ ಅವರ ಕೈ ಸೇರಿದೆ.

ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ನ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಿದ್ದರು.

71 ವರ್ಷದ ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ನಾಯಕರಲ್ಲಿ ಒಬ್ಬರಾಗಿದ್ದಾರೆ. ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಶಾಶ್ವತ ಆಹ್ವಾನಿತ ಸದಸ್ಯರಾಗಿ ಹಾಗೂ ಹರಿಯಾಣ ರಾಜ್ಯದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು.

BK Hariprasad Takes Charge as KPCC President
ಬಿಜೆಪಿ-ದಳಕ್ಕೆ ತಕ್ಕ ಉತ್ತರ; ವಿಪಕ್ಷಗಳು ಕುಚೋದ್ಯ ಬಿಟ್ಟು ಜನರ ನೋವು ನಲಿವುಗಳಿಗೆ ಸ್ಪಂದಿಸಲಿ: ಬಿ.ಕೆ ಹರಿಪ್ರಸಾದ್

ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2028ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2029ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಂಡರು.

ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್ ಜೋಡಿ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಲುವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅಧಿಕಾರ ಸ್ವೀಕರಿಸಿರುವುದು ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಮುಂದಿನ ಚುನಾವಣಾ ರಾಜಕಾರಣದಲ್ಲಿ ಅವರ ನಾಯಕತ್ವದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com