ವಿಚಾರಣೆಗೆ ಕರೆದೊಯ್ದು ಪೊಲೀಸರಿಂದ ಹಲ್ಲೆ ಆರೋಪ: ಠಾಣೆಯಲ್ಲೇ ವೃದ್ಧ ಸಾವು

ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್​ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ವಿಚಾರಣೆಗೆ ಕರೆದು ಪೊಲೀಸರ (police) ಹಲ್ಲೆಯಿಂದ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
Representative image.(Express Illustration)
ಪೊಲೀಸ್ (ಸಂಗ್ರಹ ಚಿತ್ರ)online desk
Updated on

ಯಾದಗಿರಿ: ವಿಚಾರಣೆಗೆಂದು ಪೊಲೀಸರು ಕರೆದೊಯ್ದ ವೃದ್ಧ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ವರದಿಯಾಗಿದೆ.

ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್​ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ವಿಚಾರಣೆಗೆ ಕರೆದು ಪೊಲೀಸರ (police) ಹಲ್ಲೆಯಿಂದ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

70 ವರ್ಷದ ರಾಜೇಸಾಬ್ ವಾಲಿಕಾರ್ ಅವರನ್ನು ಜಮೀನು ವ್ಯಾಜ್ಯ ಸಂಬಂಧದ ದೂರಿನ ಆಧಾರದಲ್ಲಿ ಠಾಣೆಗೆ ಕರೆಸಲಾಗಿತ್ತು. ವಿಚಾರಣೆ ವೇಳೆ ಎಎಸ್ಐ ಸಂಗಪ್ಪ ಹೊಡೆದಿದ್ದಕ್ಕೆ ವೃದ್ಧ ಕುಸಿದು ಬಿದ್ದಿದ್ದಾರೆ. ಪೊಲೀಸರೇ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.​ ಆದರೆ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಎಎಸ್ಐ ವಿರುದ್ಧ ಕ್ರಮಕ್ಕೆ ಕುಟುಂಬದವರು ಒತ್ತಾಯಿಸಿದ್ದಾರೆ.

ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎಎಸ್ಐ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Representative image.(Express Illustration)
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಲಾಕ್ ಅಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com