ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
Representation purpose only
ಸಂಗ್ರಹ ಚಿತ್ರ
Updated on

ಬಳ್ಳಾರಿ: ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬಳ್ಳಾರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜೂನ್ 25ರ ಬೆಳಿಗ್ಗೆ 06 ಗಂಟೆಯಿಂದ ಜೂನ್ 27ರ ಬೆಳಿಗ್ಗೆ 06 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಲಾಗಿದ್ದು, ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.

Representation purpose only
ರಾಜ್ಯದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್' ಸೇವೆ ಆರಂಭ: ಆರೋಗ್ಯ ಸಚಿವ UT ಖಾದರ್ ಘೋಷಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com