ರಾಜ್ಯದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್' ಸೇವೆ ಆರಂಭ: ಆರೋಗ್ಯ ಸಚಿವ UT ಖಾದರ್ ಘೋಷಣೆ

ರಾಜ್ಯದಲ್ಲಿ ಬೈಕ್ ಆ್ಯಂಬುಲೆನ್ಸ್ ಸೇವೆಯನ್ನು ಮತ್ತೆ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರ ಚರ್ಚೆ ನಡೆಸಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇಂತಹ ಬೈಕ್ ಆ್ಯಂಬುಲೆನ್ಸ್ ಸೇವೆ ಈಗಾಗಲೇ...
Bike Ambulance
ಬೈಕ್ ಆ್ಯಂಬುಲೆನ್ಸ್
Updated on

ಬೆಂಗಳೂರು: ರಾಜ್ಯದಲ್ಲಿ ಬೈಕ್ ಆ್ಯಂಬುಲೆನ್ಸ್ ಸೇವೆಯನ್ನು ಮತ್ತೆ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರ ಚರ್ಚೆ ನಡೆಸಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇಂತಹ ಬೈಕ್ ಆ್ಯಂಬುಲೆನ್ಸ್ ಸೇವೆ ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಹಾಗೂ ದೇಶದ ಕೆಲವು ನಗರಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಬೆಂಗಳೂರಿನಂತ ಮಹಾನಗರದ ಭಾರೀ ಟ್ರಾಫಿಕ್ ಹಾಗೂ ಗ್ರಾಮೀಣ ಭಾಗಗಳಲ್ಲಿ ಆ್ಯಂಬುಲೆನ್ಸ್ ತಲುಪಲು ಆಗುವ ವಿಳಂಬವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಯ ಕುರಿತು ಉನ್ನತ ಮಟ್ಟದ ಸಭೆ ನಡೆಸಿ ಸಂಪೂರ್ಣವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಗತ್ಯವಿರುವ ತಾಂತ್ರಿಕ ಹಾಗೂ ವ್ಯವಸ್ಥಾಪಕ ಅಂಶಗಳನ್ನು ಪರಿಶೀಲಿಸಿದ ಬಳಿಕ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಲಿದೆ ಎಂದರು.

Bike Ambulance
Triangle love: ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಜಗಳ; ಮಚ್ಚೇಟಿನಿಂದ ಮುಂಗೈ ಕಟ್!

ಈ ಯೋಜನೆ ಜಾರಿಗೆ ಬಂದರೆ, ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಹಾಗೂ ರೋಗಿಯನ್ನು ವೇಗವಾಗಿ ಆಸ್ಪತ್ರೆಗೆ ಸಾಗಿಸಲು ದೊಡ್ಡ ನೆರವಾಗಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಬೈಕ್ ಆ್ಯಂಬುಲೆನ್ಸ್‌ಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯವಾದ ವೈದ್ಯಕೀಯ ಉಪಕರಣಗಳು ಇರಲಿದ್ದು, ತರಬೇತಿ ಪಡೆದ ಸಿಬ್ಬಂದಿ ತುರ್ತು ಸಂದರ್ಭಗಳಲ್ಲಿ ಸ್ಥಳಕ್ಕೆ ಶೀಘ್ರವಾಗಿ ತಲುಪಲು ಸಹಾಯ ಮಾಡಲಿದ್ದಾರೆ. ಬೈಕ್ ಆ್ಯಂಬುಲೆನ್ಸ್ ವ್ಯವಸ್ಥೆಯು ವೈದ್ಯಕೀಯ ಸೇವಾ ವಲಯದಲ್ಲಿ ಒಂದು ಕ್ರಾಂತಿಕಾರಿ ಬದಲಾವಣೆ. ಮುಂಬರುವ ದಿನಗಳಲ್ಲಿ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಇವುಗಳನ್ನು ಇನ್ನಷ್ಟು ಬಲಪಡಿಸಿದರೆ, ನಗರಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ಸುಗಮಗೊಳಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com