"ಅಪ್ಪಾ, ಅಮ್ಮಾ... ನಾನು ತಪ್ಪು ಮಾಡಿದೆ..." : ಗರ್ಭಿಣಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ, ಬಲಪಂಥೀಯ ಕಾರ್ಯಕರ್ತನ ವಿರುದ್ಧ ತನಿಖೆ

ಮಂಗಳವಾರ ಸಂಜೆ 4 ಗಂಟೆಗೆ ಮಂಗಳೂರಿನ ಸುರತ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಯ ನಂತರ ಪೊಲೀಸರು ಅಪ್ರಾಪ್ತ ಬಾಲಕಿಯ ಭ್ರೂಣವನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ.
crime, file photo
ಅಪರಾಧonline desk
Updated on

ಮಂಗಳೂರು: 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ತನ್ನ ಬಾಯ್ ಫ್ರೆಂಡ್ ತೊರೆದು ಹೋದದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮಂಗಳವಾರ ಸಂಜೆ 4 ಗಂಟೆಗೆ ಮಂಗಳೂರಿನ ಸುರತ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಯ ನಂತರ ಪೊಲೀಸರು ಅಪ್ರಾಪ್ತ ಬಾಲಕಿಯ ಭ್ರೂಣವನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ.

ಬಾಲಕಿ ಬರೆದಿಟ್ಟ ಆತ್ಮಹತ್ಯೆ ಪತ್ರದಲ್ಲಿ, ಅನೀಶ್ ಪೂಜಾರಿ ಎಂಬಾತನೊಂದಿಗೆ ತನಗೆ ಸಂಬಂಧವಿದ್ದು, ಗರ್ಭಧಾರಣೆಯ ಬಗ್ಗೆ ತಿಳಿಸಿದ ನಂತರ ಆತ ತನಗೆ ದ್ರೋಹ ಬಗೆದಿದ್ದಾನೆ ಎಂದು ಹೇಳಿದ್ದಾಳೆ. 'ನಾನು ತಪ್ಪು ಮಾಡಿದೆ' ಎಂದು ಆಕೆಯ ಪೋಷಕರಿಗೆ ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ಹೇಳಿಕೊಂಡಿದ್ದಾಳೆ. ಬಾಲಕಿ ಸುಮಾರು 2 ತಿಂಗಳ ಗರ್ಭಿಣಿಯಾಗಿದ್ದಳು ಮತ್ತು ಆಕೆ ಆರೋಪಿಗೆ ಆ ಬಗ್ಗೆ ಹೇಳಿದಾಗ, ಆತ ಆಕೆಯನ್ನು ಸ್ವೀಕರಿಸಲು ನಿರಾಕರಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

crime, file photo
ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಉಲ್ಲಾಸ್‌ ಗೌಡನ ಬಂಧನ; ಆರೋಪಿ ಆಸ್ತಿ ಮುಟ್ಟುಗೋಲಿಗೆ ಆಗ್ರಹ

ಪೂಜಾರಿ ಹಿಂದೂ ಬಲಪಂಥೀಯ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರಿಂದ, ಬಾಲಕಿ ಸಹಾಯಕ್ಕಾಗಿ ಸಂಘಟನೆಯನ್ನು ಸಂಪರ್ಕಿಸಿದಳು ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆತ್ಮಹತ್ಯೆ ಪತ್ರವನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಸುರತ್ಕಲ್ ಪೊಲೀಸರಿಗೆ ಅನೀಶ್ ವಿರುದ್ಧ ದೂರು ದಾಖಲಿಸಿದ್ದು, ಆತನ ವಿರುದ್ಧ ಪೋಕ್ಸೋ, ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ತಂಡ ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com