ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ.
CM DK Shivakumar Allocates District Oversight to Karnataka Cabinet for Flood Management
ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ಸಚಿವರಿಗೆ ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ಹೌದು.. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಹಾಗೂ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತು ಪ್ರಮುಖವಾಗಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಮುಖ್ಯಮಂತ್ರಿಗಳು ಸಚಿವರಿಗೆ ವಿವಿಧ ಜಿಲ್ಲೆಗಳ ತುರ್ತು ಪ್ರಕೃತಿ ವಿಕೋಪ ಮೇಲುಸ್ತುವಾರಿಜವಾಬ್ದಾರಿಯನ್ನು ಹಂಚಿಕೆ ಮಾಡಿ ಆದೇಶಿಸಿದ್ದಾರೆ.

CM DK Shivakumar Allocates District Oversight to Karnataka Cabinet for Flood Management
ಸಮತೋಲನ ಆಹಾರದ ಪಾಠದಲ್ಲಿ ಮೊಟ್ಟೆ ಮಾಂಸಾಹಾರದ ಉಲ್ಲೇಖವಿಲ್ಲ: ಸ್ಥಳೀಯ ಸಂಸ್ಕೃತಿಗೆ ಆದ್ಯತೆಯಿಲ್ಲ; ಮಧು ಬಂಗಾರಪ್ಪ

ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಹಾಗೂ ಯುವ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಪ್ರಮುಖ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಅಂದಹಾಗೆ ಇದು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ ಉಸ್ತುವಾರಿ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.

ಯಾವ ಜಿಲ್ಲೆಗೆ ಯಾರು ಉಸ್ತುವಾರಿ?

ಡಿಸಿಎಂ ಡಾ. ಜಿ. ಪರಮೇಶ್ವರ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಸಚಿವ ಕೃಷ್ಣ ಭೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಅಂತೆಯೇ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು,. ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಉಳಿದಂತೆ ಡಾ. ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಮತ್ತು ಚಾಮರಾಜನಗರ, ಯು.ಟಿ. ಖಾದರ್ ಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಎಂ.ಬಿ. ಪಾಟೀಲ್ ಗೆ ವಿಜಯಪುರ ಮತ್ತು ಬಾಗಲಕೋಟೆ, ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಅಂತೆಯೇ ಸಚಿವ ಸತೀಶ್ ಜಾರಕಿಹೊಳಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಕೆ.ಜೆ. ಜಾರ್ಜ್ ಗೆ ಚಿಕ್ಕಮಗಳೂರು ಮತ್ತು ದಾವಣಗೆರೆ, ಈಶ್ವರ ಖಂಡ್ರೆಗೆ ಬೀದರ್ ಮತ್ತು ಗದಗ, ಭೈರತಿ ಸುರೇಶ್ ಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಡಾ. ಶರಣಪ್ರಕಾಶ್ ಪಾಟೀಲ್ ಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com