ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

ಒಪ್ಪಿಗೆ ಇಲ್ಲದೆ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳ ಪ್ರಕಟಣೆ, ಪ್ರಸರಣ ಅಥವಾ ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಠಿಣ ಮತ್ತು ತಕ್ಷಣದ ಕ್ರಮ ಕೈಗೊಳ್ಳುವಂತೆ ರಾಜ್ಯಾದ್ಯಂತ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Home Minister Priyank Kharge
ಗೃಹ ಸಚಿವ ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ಸೇಡಿನ ಉದ್ದೇಶದಿಂದ ಅಶ್ಲೀಲ, ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ವೀಡಿಯೊ ಪ್ರಕರಣಗಳಲ್ಲಿ ಎಫ್‌ಐಆರ್ ಕಡ್ಡಾಯಗೊಳಿಸುವಂತೆ ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ.

ಒಪ್ಪಿಗೆ ಇಲ್ಲದೆ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳ ಪ್ರಕಟಣೆ, ಪ್ರಸರಣ ಅಥವಾ ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಠಿಣ ಮತ್ತು ತಕ್ಷಣದ ಕ್ರಮ ಕೈಗೊಳ್ಳುವಂತೆ ರಾಜ್ಯಾದ್ಯಂತ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಒಂದು ಫೋಟೋ, ವಿಡಿಯೋ ಸೆರೆಹಿಡಿಯಲು ಅಥವಾ ರೆಕಾರ್ಡ್ ಮಾಡಲು ಒಪ್ಪಿಗೆ ನೀಡಿದರೆ ಅದು ಅದರ ಪ್ರಸಾರಕ್ಕೆ ಒಪ್ಪಿಗೆಯಾಗಲ್ಲ ಅಂತಾ ಆದೇಶ ಸ್ಪಷ್ಟಪಡಿಸುತ್ತದೆ. ಒಪ್ಪಿಗೆಯಿಲ್ಲದೆ ಅಂತಹ ವಿಷಯವನ್ನು ಹಂಚಿಕೊಳ್ಳುವುದು, ಪ್ರಕಟಿಸುವುದು, ಫಾರ್ವರ್ಡ್ ಮಾಡುವುದು ಅಥವಾ ಪ್ರಸಾರ ಮಾಡುವುದು ಅಪರಾಧವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿದ್ದಾರೆ.

ಸೇಡಿನ ಉದ್ದೇಶದಿಂದ ಅಶ್ಲೀಲ, ಲೈಂಗಿಕ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ವೀಡಿಯೊಗಳ ಪ್ರಕರಣಗಳ ಸಂಬಂಧಿಸಿದಂತೆ ಒಪ್ಪಿಗೆಯಿಲ್ಲದ ಪ್ರಸಾರ ಮಾಡಿದ ದೂರುಗಳಲ್ಲಿ ಎಫ್‌ಐಆರ್‌ಗಳನ್ನು ಕಡ್ಡಾಯವಾಗಿ ದಾಖಲಿಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಈ ಸಂಬಂಧ ಬಿಎನ್‌ಎಸ್‌ನ ಸೆಕ್ಷನ್ 77 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66ಇ, 67 ಮತ್ತು 67ಎ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ, 2023 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಸಂತ್ರಸ್ತೆ ಈ ಹಿಂದೆ ರೆಕಾರ್ಡ್ ಮಾಡಲು ಒಪ್ಪಿಗೆ ನೀಡಿದ್ದರೂ ಪೊಲೀಸರು ದೂರುಗಳ ನೋಂದಣಿಯನ್ನು ನಿರಾಕರಿಸಬಾರದು ಅಥವಾ ವಿಳಂಬ ಮಾಡಬಾರದು. ಬೆದರಿಕೆಗಳು, ಸುಲಿಗೆ, ಲೈಂಗಿಕ ಅನುಕೂಲಗಳು ಅಥವಾ ಇತರ ಬಲವಂತದ ಬೇಡಿಕೆಗಳನ್ನು ಒಳಗೊಂಡ ಪ್ರಕರಣಗಳಲ್ಲಿ, ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದ ಹೆಚ್ಚುವರಿ ನಿಬಂಧನೆಗಳನ್ನು ಸಹ ಅನ್ವಯಿಸಬೇಕು ಎಂದು ಗೃಹ ಸಚಿವರು ನಿರ್ದೇಶನ ನೀಡಿದ್ದಾರೆ.

ಆಕ್ಷೇಪಾರ್ಹ ವಿಷಯವನ್ನು ತೆಗೆದುಹಾಕಲು ಅಥವಾ ನಿರ್ಬಂಧಿಸಲು, ಎಲೆಕ್ಟ್ರಾನಿಕ್ ಪುರಾವೆಗಳನ್ನು ಸಂರಕ್ಷಿಸಲು ಮತ್ತು ತಾಂತ್ರಿಕ ತನಿಖೆಗಾಗಿ ಸೈಬರ್ ಅಪರಾಧ ಪೊಲೀಸ್ ಠಾಣೆಗಳು ಮತ್ತು ಸಿಐಡಿ ಸೈಬರ್ ವಿಭಾಗದೊಂದಿಗೆ ಸಮನ್ವಯ ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಂತ್ರಸ್ತರನ್ನು ಘನತೆ ಮತ್ತು ಸೂಕ್ಷ್ಮತೆಯಿಂದ ನಡೆಸಿಕೊಳ್ಳಬೇಕು ಎಂದು ಆದೇಶವು ಒತ್ತಿಹೇಳುತ್ತದೆ. ಅವರ ಗುರುತನ್ನು ಗೌಪ್ಯವಾಗಿಡಬೇಕು, ಸಂತ್ರಸ್ತೆಯನ್ನು ಅವಮಾನಿಸುವುದನ್ನು ತಪ್ಪಿಸಬೇಕು ಮತ್ತು ಸಾಧ್ಯವಾದಲ್ಲೆಲ್ಲಾ, ಮಹಿಳಾ ಸಂತ್ರಸ್ತೆಯ ದೂರುಗಳನ್ನು ಮಹಿಳಾ ಅಧಿಕಾರಿಗಳು ದಾಖಲಿಸಬೇಕು.

Home Minister Priyank Kharge
ಅಕ್ರಮ ನಡೆದಿದ್ದರೆ ನಾನೇಕೆ ಜೈಲಿನಲ್ಲಿಲ್ಲ? ನನ್ನ ಲೆಕ್ಕ ಕೇಳುವ ನೀವು RSS ಲೆಕ್ಕ ಯಾವಾಗ ತೋರಿಸುತ್ತೀರಿ?: BJPಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪೂರ್ವಾನುಮತಿ" ತಪ್ಪಾದ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವಲ್ಲಿ ಯಾವುದೇ ವೈಫಲ್ಯ ಅಥವಾ ವಿಳಂಬವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಇಲಾಖಾ ಕ್ರಮಕ್ಕೆ ಕಾರಣವಾಗಬಹುದು ಎಂದು ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com