ಬೆಂಗಳೂರಿನ ಹವಾಮಾನ, ಮಾನವ ಸಂಪನ್ಮೂಲಕ್ಕೆ ಸರಿಸಾಟಿ ನಗರವಿಲ್ಲ:ಮತ್ತೊಂದು ಗಾಲ್ಫ್ ಕ್ಲಬ್ ನಿರ್ಮಿಸಿ; CM ಡಿಕೆ ಶಿವಕುಮಾರ್

150 ವರ್ಷದ ಇತಿಹಾಸವಿರುವ ಗಾಲ್ಫ್ ಕ್ಲಬ್, ಇಷ್ಟು ಹೊತ್ತಿಗೆ ಬೆಂಗಳೂರಿನಲ್ಲಿ ಮೂರ್ನಾಲ್ಕು ಗಾಲ್ಫ್ ಕೋರ್ಸ್ ನಿರ್ಮಿಸಬೇಕಾಗಿತ್ತು ಎಂಬುದು ನನ್ನ ಅಭಿಪ್ರಾಯ.
ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್
ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡಿದರು.

ಸ್ಯಾಂಕಿ ರಸ್ತೆಯ ಗಾಲ್ಫ್ ಕ್ಲಬ್ ನಲ್ಲಿ ಬುಧವಾರ ನಡೆದ ಬೆಂಗಳೂರು ಗಾಲ್ಫ್ ಕ್ಲಬ್ ನ 150ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿದರು.

"ಗಾಲ್ಫ್ ಕ್ಲಬ್ 150 ವರ್ಷ ಪೂರ್ಣಗೊಳಿಸಿದೆ. ಈ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆಗಳು. ನಾನು ಮುಖ್ಯಮಂತ್ರಿಯಾದ ಬಳಿಕ ನಾನು ಭಾಗವಹಿಸುತ್ತಿರುವ ಮೊದಲ ಖಾಸಗಿ ಕಾರ್ಯಕ್ರಮ. ನಾನು ಸಿಎಂ ಎನ್ನುವುದಕ್ಕಿಂತ ಇಲ್ಲಿನ ಸದಸ್ಯ. ಹೀಗಾಗಿ ಬಂದಿದ್ದೇನೆ. ನನ್ನ ಮಾತು ನಿಮಗೆ ಹಿತವಾಗಿರುವುದಿಲ್ಲ. ನಿಮ್ಮ ಚಪ್ಪಾಳೆ ಬೇಡ. ನಿಮಗೆ ಇಷ್ಟವಾಗುತ್ತದೆಯೋ ಇಲ್ಲವೋ ಆದರೆ ನಾನು ಸತ್ಯ ನುಡಿಯಬೇಕು" ಎಂದರು.

ಬೆಂಗಳೂರಿನಲ್ಲಿ ಮತ್ತಷ್ಟು ಗಾಲ್ಫ್ ಕೋರ್ಸ್ ನಿರ್ಮಿಸಬೇಕಾಗಿತ್ತು"ಈ ಕ್ಲಬ್ ಗೆ ದೊಡ್ಡ ಇತಿಹಾಸವಿದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ. ನೀವುಗಳು ಯಾರೂ ಸಣ್ಣವರಲ್ಲ. ಬೆಂಗಳೂರು ಕಟ್ಟುವ ಸಾಮರ್ಥ್ಯ ಇರುವ ಅಧಿಕಾರಿಗಳು, ಉದ್ಯಮಿಗಳು ಇದ್ದೀರಿ. 150 ವರ್ಷದ ಇತಿಹಾಸವಿರುವ ಗಾಲ್ಫ್ ಕ್ಲಬ್, ಇಷ್ಟು ಹೊತ್ತಿಗೆ ಬೆಂಗಳೂರಿನಲ್ಲಿ ಮೂರ್ನಾಲ್ಕು ಗಾಲ್ಫ್ ಕೋರ್ಸ್ ನಿರ್ಮಿಸಬೇಕಾಗಿತ್ತು ಎಂಬುದು ನನ್ನ ಅಭಿಪ್ರಾಯ.

ನಿಮ್ಮಲ್ಲಿ ಏನು ಕಡಿಮೆ ಇದೆ?" ಎಂದು ಪ್ರಶ್ನಿಸಿದರು. "ಅಟಲ್ ಬಿಹಾರಿ ವಾಜಪೇಯಿ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆಗಾಗಿ ಬಂದಾಗ, ಇಡೀ ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ಹೋಗುತ್ತಿದ್ದಾರೆ ಎಂದು ಹೇಳಿದ್ದರು. ಈ ವಿಚಾರವನ್ನು ನಾನು ವಿಧಾನಸಭೆಯಲ್ಲಿ ಹಲವು ಬಾರಿ ಪ್ರಸ್ತಾಪ ಮಾಡಿದ್ದೇನೆ. ನಿಮಗೆ ಕಾಲ ಮಿಂಚಿಲ್ಲ. ಈಗಲೂ ಸಮಯವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನನಗೆ ಅರಿವಿದೆ" ಎಂದರು.

ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್
ಬಿಡದಿ ವಿವಾದ: ಶಿವಕುಮಾರ್ ಜೊತೆ ಚರ್ಚಿಸಲು ನನಗೆ ಯಾವುದೇ 'ಅಹಂ' ಸಮಸ್ಯೆ ಇಲ್ಲ- ಎಚ್.ಡಿ ಕುಮಾರಸ್ವಾಮಿ

ಇತಿಹಾಸ ಸ್ಮರಿಸುವುದಕ್ಕಿಂತ ಇತಿಹಾಸ ಬರೆಯುವುದರಲ್ಲಿ ಆಸಕ್ತಿ"ಬೊಮ್ಮಯಿ ಅವರಾಗಿದ್ದ ಕಾರಣಕ್ಕೆ ನಿಮಗೆ ನೀಡಲಾಗಿರುವ ಅನುಮತಿಯನ್ನು ನವೀಕರಿಸಿದ್ದಾರೆ. ನಾನಾಗಿದ್ದರೆ ನವೀಕರಣ ಮಾಡುತ್ತಿರಲಿಲ್ಲ. ನಾನು ಅನುಮತಿ ನವೀಕರಿಸಬೇಕಾದರೆ ಮುಂದಿನ ಪೀಳಿಗೆಗೆ ಒಂದೆರಡು ಗಾಲ್ಫ್ ಕೋರ್ಸ್ ಆರಂಭಿಸಿ ಎಂದು ಷರತ್ತು ಹಾಕುತ್ತಿದ್ದೆ. ನಾನು ಇತಿಹಾಸ ಓದುವುದಕ್ಕಿಂತ ಇತಿಹಾಸ ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದೇನೆ.

ಬೆಂಗಳೂರಿನ ಹವಾಮಾನ, ಮಾನವ ಸಂಪನ್ಮೂಲಕ್ಕೆ ಸರಿಸಾಟಿ ನಗರವಿಲ್ಲ ನಾನು ದಾವೋಸ್ ಗೆ ಹೋಗಿದ್ದಾಗ ಮಹಾರಾಷ್ಟ್ರ ಸಿಎಂ ಬಂದು ನೀವು ಯಾವುದೇ ಒಪ್ಪಂದಕ್ಕೆ ಸಹಿ ಹಾಕುತ್ತಿಲ್ಲ ಯಾಕೆ ಎಂದರು. ಅದಕ್ಕೆ ನಾನು, ಅದರ ಅವಶ್ಯಕತೆ ಇಲ್ಲ. ಬೆಂಗಳೂರಿನ ಹವಾಮಾನ, ಮಾನವ ಸಂಪನ್ಮೂಲಗಳು ಬೇರೆ ಎಲ್ಲೂ ಇಲ್ಲ. ಸಿಲಿಕಾನ್ ಸಿಟಿ ಕ್ಯಾಲಿಫೋರ್ನಿಯ ದಲ್ಲಿ 13 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದರೆ ಬೆಂಗಳೂರಿನಲ್ಲಿ 26 ಲಕ್ಷ ಇಂಜಿನಿಯರ್ ವೃತ್ತಿಪರರು ಇದ್ದಾರೆ.

ಇಲ್ಲಿ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳಿದ್ದು, ಪ್ರತಿವರ್ಷ 13 ಸಾವಿರಕ್ಕೂ ಹೆಚ್ಚು ವೈದ್ಯರು ತಯಾರಾಗುತ್ತಾರೆ. 270 ಇಂಜಿನಿಯರಿಂಗ್ ಕಾಲೇಜುಗಳಿವೆ" ಎಂದು ವಿವರಿಸಿದರು. "ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.35 ಕೋಟಿ ವಾಹನಗಳಿವೆ. ಅಲ್ಲಿಗೆ ಸರಾಸರಿ ಒಬ್ಬರಿಗೆ ಒಂದು ವಾಹನಗಳಿವೆ. ಬೇರೆ ನಗರಗಳಲ್ಲಿ 19% ವಿಸ್ತೀರ್ಣದಷ್ಟು ರಸ್ತೆಗಳಿವೆ.

ನಮ್ಮಲ್ಲಿ ಕೇವಲ 8%ನಷ್ಟು ಮಾತ್ರ ರಸ್ತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಬೆಂಗಳೂರು ಯೋಜಿತನಗರವಲ್ಲ. ಮುಂದೆ ವಿಸ್ತರಣೆ ಮಾಡಬೇಕಾದರೆ ಇದರ ಬಗ್ಗೆ ಆಲೋಚನೆ ಮಾಡಬೇಕಲ್ಲವೇ? ಈಗಲಾದರೂ ಸುಮಾರು 200 ಎಕರೆ ಜಾಗ ಇದ್ದರೆ ಹುಡುಕಿ" ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com