ರಾಜ್ಯ ಚುನಾವಣಾ ಆಯೋಗ ಕಾಂಗ್ರೆಸ್ ಸರ್ಕಾರದ ಕೈಗೊಂಬೆ: ಛಲವಾದಿ ನಾರಾಯಣಸ್ವಾಮಿ

ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬು ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ನಾರಾಯಣಸ್ವಾಮಿ, ಚುನಾವಣಾ ಆಯೋಗವು ರಾಜ್ಯಾದ್ಯಂತ ಎಸ್ಐಆರ್ ಅನ್ನು ಕಡ್ಡಾಯಗೊಳಿಸಿದೆ.
 chalavadi Narayanaswamy
ಛಲವಾದಿ ನಾರಾಯಣಸ್ವಾಮಿ
Updated on

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ರಾಜ್ಯ ಚುನಾವಣಾ ಆಯೋಗವು ಬೆಂಗಳೂರಿನ 27 ವಾರ್ಡ್‍ಗಳಲ್ಲಿ ಎಸ್‍ಐಆರ್ ನಡೆಸುತ್ತಿದೆ. ಇದು ಕಾನೂನು ಬಾಹಿರ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಭಾರತ ಚುನಾವಣಾ ಆಯೋಗವು ವಿಶೇಷ ಮತಪಟ್ಟಿ ಪರಿಷ್ಕರಣೆ (ಎಸ್‍ಐಆರ್) ನಡೆಸುತ್ತಿದೆ. ಆದರೆ ಇದಕ್ಕೆ ಸಮಾನಾಂತರವಾಗಿ ರಾಜ್ಯ ಚುನಾವಣಾ ಆಯೋಗವು ಎಸ್‍ಐಆರ್ ನಡೆಸುತ್ತಿದೆ. ಇದು ತಪ್ಪು. ಈ ಬಗ್ಗೆ ರಾಜ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.

ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬು ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ನಾರಾಯಣಸ್ವಾಮಿ, ಚುನಾವಣಾ ಆಯೋಗವು ರಾಜ್ಯಾದ್ಯಂತ ಎಸ್ಐಆರ್ ಅನ್ನು ಕಡ್ಡಾಯಗೊಳಿಸಿದೆ, ದತ್ತಾಂಶ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜೂನ್ 16 ರಿಂದ ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದ್ದಾರೆ.

ಎಸ್ಇಸಿ ಗಾಂಧಿನಗರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ 27 ವಾರ್ಡ್‌ಗಳಲ್ಲಿ ಪ್ರತ್ಯೇಕ ಎಸ್ಐಆರ್ ಅನ್ನು ಪ್ರಾರಂಭಿಸಿದೆ ಎಂದು ಹೇಳಲಾಗುತ್ತಿದೆ. ಜೂನ್ 26 ರಿಂದ ಕ್ಷೇತ್ರ ಕಾರ್ಯಾಚರಣೆಗಳನ್ನು ನಡೆಸಲು ಅದು ಯೋಜಿಸಿದೆ.

 chalavadi Narayanaswamy
SIR ಪ್ರಕ್ರಿಯೆ ಗಂಭೀರವಾಗಿ ತೆಗೆದುಕೊಳ್ಳಿ, ಇಲ್ಲದಿದ್ದರೆ ಟಿಕೆಟ್ ಮರೆತುಬಿಡಿ: 'ಕೈ' ಮುಖಂಡರಿಗೆ ಬಿ.ಕೆ ಹರಿಪ್ರಸಾದ್ ಖಡಕ್ ವಾರ್ನಿಂಗ್

ಕೇಂದ್ರ ಚುನಾವಣಾ ಆಯೋಗವು ಕಾನೂನು ಪ್ರಕಾರ ಎಸ್‍ಐಆರ್ ನಡೆಸುತ್ತಿದೆ. ಆದರೆ ತಮಗೆ ಬೇಕಾದವರ ಹೆಸರು ಉಳಿಸಲು ಹೀಗೆ ಎಸ್‍ಐಆರ್ ನಡೆಸಲಾಗುತ್ತಿದೆ ಎಂದು ದೂರಲಾಗುತ್ತಿದೆ. ಇದು ತಪ್ಪು. ಕೇಂದ್ರ ಚುನಾವಣಾ ಆಯೋಗದ ಅನುಮತಿ ಇಲ್ಲದೆ ಮತ್ತೊಂದು ಎಸ್‍ಐಆರ್ ಅನ್ನು ರಾಜ್ಯ ಚುನಾವಣಾ ಆಯೋಗ ಮಾಡುವಂತಿಲ್ಲ. ಆದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿಸುತ್ತಿದೆ. ತಕ್ಷಣ ಇದನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿರುವುದಾಗಿ ಹೇಳಿದರು.

ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗದ ಅಧೀನದಲ್ಲಿ ಕೆಲಸ ಮಾಡಬೇಕು. ಯಾವುದೇ ರಾಜ್ಯ ಸರ್ಕಾರದ ಅಧೀನದಲ್ಲಿ ಅಲ್ಲ. ಇಂತಹ ಸಮಾನಾಂತರ ಎಸ್‍ಐಆರ್‌ನಿಂದ ಜನರಲ್ಲಿ ಅನಗತ್ಯ ಆತಂಕ ಉಂಟಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅನವಶ್ಯಕವಾಗಿ ಆತಂಕ ಹುಟ್ಟಿಸುತ್ತಿದೆ ಎಂದು ದೂರಿದರು. ಇಂತಹ ಎಸ್‍ಐಆರ್ ವಿರುದ್ಧ ಕಾನೂನು ಕ್ರಮವಾಗಬೇಕು.

ನಮ್ಮ ಮನವಿ ಪರಿಗಣಿಸಿದ ಆಯುಕ್ತರು ಕೇಂದ್ರ ಚುನಾವಣಾ ಆಯೋಗಕ್ಕೆ ಮುಂದಿನ ಕ್ರಮಕ್ಕೆ ಕಳುಹಿಸುವುದಾಗಿ ಹೇಳಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com