ಕೋರ್ಟ್ ಆದೇಶ ಉಲ್ಲಂಘನೆ: ಕಾಂಗ್ರೆಸ್ ಮುಖಂಡ ಅಮೃತ್‌ ಶೆಣೈಗೆ 3 ವರ್ಷ ಜೈಲು, ₹1 ಲಕ್ಷ ದಂಡ

ಜೈಲು ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಮೃತ್ ಶೆಣೈ ಅವರು ಬಂಧಿಸಿದ್ದು, ಹಿರಿಯಡ್ಕ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Congress leader Amrith Shenoy arrested in Udupi, faces 3 years in prison
ಅಮೃತ್‌ ಶೆಣೈ
Updated on

ಉಡುಪಿ: ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರಿಗೆ ಗ್ರಾಹಕ ವ್ಯಾಜ್ಯಗಳ ಆಯೋಗವು ಮೂರು ವರ್ಷ ಸಾದಾ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಜೈಲು ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಮೃತ್ ಶೆಣೈ ಅವರು ಬಂಧಿಸಿದ್ದು, ಹಿರಿಯಡ್ಕ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತ ಶೆಣೈ ಅವರು ರಿಯಲ್‌ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಉಡುಪಿ ನಗರದಲ್ಲಿ ಫ್ಲ್ಯಾಟ್ ಗಳನ್ನು ನಿರ್ಮಿಸಿದ್ದಾರೆ. ಅದರ ಮಾಲಕತ್ವವನ್ನು ವಾರಸುದಾರರಿಗೆ ವರ್ಗಾಯಿಸುವಲ್ಲಿ ಶೆಣೈ ವಿಫಲರಾಗಿದ್ದರು ಎಂದು ಆರೋಪಿಸಲಾಗಿದೆ.

Congress leader Amrith Shenoy arrested in Udupi, faces 3 years in prison
ನ್ಯಾಯಾಂಗ ನಿಂದನೆ ಆರೋಪ: Byju's ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ; 67 ಲಕ್ಷ ರೂ ದಂಡ ವಿಧಿಸಿದ ಸಿಂಗಾಪುರ ಕೋರ್ಟ್..!

ಈ ಸಂಬಂಧ ಸಂತೋಷ್‌ ಪೈ ಎಂಬುವವರು ಅಮೃತ್‌ ಶೆಣೈ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಉಡುಪಿಯಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ವೈಗರ್‌ ಅಪಾರ್ಟ್‌ಮೆಂಟ್‌ನ ಮನೆ ಸಂಖ್ಯೆ 304ನ್ನು ಅರ್ಜಿದಾರರ ಹೆಸರಿಗೆ ನೋಂದಣಿ ಮಾಡಿಕೊಡಬೇಕು ಅಥವಾ ಪರ್ಯಾಯವಾಗಿ 27.20 ಲಕ್ಷ ರೂ. ಮೊತ್ತವನ್ನು ವಾರ್ಷಿಕ ಶೇ.9 ಬಡ್ಡಿಯೊಂದಿಗೆ ಪಾವತಿಸಬೇಕು ಎಂದು ಆದೇಶಿಸಿತ್ತು.

ಆದರೆ ಆಯೋಗದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಸಂತೋಷ್‌ ಪೈ ಅವರು ಎಕ್ಸಿಕ್ಯೂಷನ್‌ ಕೇಸ್‌ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಸೆಕ್ಷನ್‌ 72ರಡಿ ಆರೋಪಿಯು ಶಿಕ್ಷಾರ್ಹ ಅಪರಾಧ ಎಸಗಿರುವುದಾಗಿ ಪರಿಗಣಿಸಿ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ತೀರ್ಪಿನಂತೆ ಅಮೃತ್‌ ಶೆಣೈ ಅವರಿಗೆ ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com