ಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ​​​​​​ ವಾರಂಟ್

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ಆದೇಶವಿದ್ದರೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೃತ ಸೌಜನ್ಯ ಮಾವ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ.
veerendra heggade, vittal gowda
ವೀರೇಂದ್ರ ಹೆಗ್ಗಡೆ, ವಿಠಲ್ ಗೌಡ
Updated on

ಮಂಗಳೂರು: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ಆದೇಶವಿದ್ದರೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೃತ ಸೌಜನ್ಯ ಮಾವ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ ಜಾರಿಗೊಳಿಸಿದೆ. ಹೀಗಾಗಿ ವಿಠ್ಠಲ್ ಗೌಡ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಜೂನ್ 8ರಂದೇ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು. ವಿಠ್ಠಲ್ ಗೌಡನನ್ನು ಬಂಧಿಸಿ ಜೂನ್ 30ರೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶ ನೀಡಲಾಗಿದೆ. ತನ್ನ ವಿರುದ್ಧ ಬಂಧನ ವಾರೆಂಟ್ ಜಾರಿಯಾಗುತ್ತಿದ್ದಂತೆ ವಿಠ್ಠಲ್ ಗೌಡ ತಲೆಮರೆಸಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಠ್ಠಲ್ ಗೌಡನ ಮನೆ ಆತನ ಸಹೋದರಿ ಕುಸುಮಾವತಿ ನಿವಾಸ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿಯೂ ಪೊಲೀಸರು ತಪಾಸಣೆ ನಡೆಸಿದ್ದಾರೆ.

veerendra heggade, vittal gowda
ರಾಮಮಂದಿರದ ದೇಣಿಗೆ ದುರುಪಯೋಗ; ಪೇಜಾವರ ಶ್ರೀಗಳು ಹೇಳಿದ್ದೇನು?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com