ಸಿದ್ದರಾಮಯ್ಯ ಜೊತೆ ಯಾವ ಭಿನ್ನಾಭಿಪ್ರಾಯವೂ ಇಲ್ಲ: ಸತೀಶ್ ಜಾರಕಿಹೊಳಿ

ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಒಟ್ಟಿಗೆ ಇದ್ದೇವೆ ಮತ್ತು ಮುಂದೆ ಭವಿಷ್ಯದಲ್ಲಿ ಒಟ್ಟಿಗೆ ಇರುತ್ತೇವೆ" ಎಂದು ಸತೀಶ್ ಜಾರಕಿಹೊಳಿ ಹೇಳಿದರು.
Siddaramaiah to continue as CM for five years, says Satish Jarkiholi
ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ

ಬೆಳಗಾವಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಜೊತೆಗಿನ ಸಂಬಂಧದಲ್ಲಿ ಯಾವುದೇ ಬಿಕ್ಕಟ್ಟಿಲ್ಲ , ಇಬ್ಬರು ನಾಯಕರು ಒಗ್ಗಟ್ಟಿನಿಂದ ಇದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.

ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಒಟ್ಟಿಗೆ ಇದ್ದೇವೆ ಮತ್ತು ಮುಂದೆ ಭವಿಷ್ಯದಲ್ಲಿ ಒಟ್ಟಿಗೆ ಇರುತ್ತೇವೆ" ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಕರ್ನಾಟಕ ಕಾಂಗ್ರೆಸ್ ಘಟಕದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು, ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಷ್ಠರಾಗಿರುವ ಹಿರಿಯ ನಾಯಕರ ಮತ್ತು ಅವರ ನಡುವಿನ ಭಿನ್ನಾಭಿಪ್ರಾಯಗಳ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಮಧ್ಯೆ ಸತೀಶ್ ಸ್ಪಷ್ಟನೆ ನೀಡಿದ್ದಾರೆ.

Siddaramaiah to continue as CM for five years, says Satish Jarkiholi
ಸಚಿವ ಸತೀಶ್ ಜಾರಕಿಹೊಳಿ ಸಹೋದರಿ ಪತಿ ಮನೆ-ಕಚೇರಿ ಮೇಲೆ ED ದಾಳಿ!

ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಸಚಿವರು, “ರಾಜ್ಯದಲ್ಲಿ ಇನ್ನು ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗಿದ್ದರಿಂದಲೇ ಸದ್ಯಕ್ಕೆ ನಮಗೆ ತಾತ್ಕಾಲಿಕವಾಗಿ ಉಸ್ತುವಾರಿಜವಾಬ್ದಾರಿ ನೀಡಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ” ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com