ಬೆಳಗಾವಿ: ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ..!

ಕಳೆದ ಕೆಲವು ದಿನಗಳಿಂದ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆರೋಪಿ, ಆಗಾಗ ಜಗಳವಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
The deceased has been identified as Shobha Pargonda Sarwad.
ಹತ್ಯೆಯಾದ ಮಹಿಳೆ
Updated on

ಬೆಳಗಾವಿ: ಪತ್ನಿಯ ಚಾರಿತ್ರ್ಯ ಶಂಕಿಸಿದ್ದ ಪತಿಯೊಬ್ಬ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಎಂದು ಗುರುತಿಸಲಾಗಿದ್ದು, ಆರೋಪಿ ಪರಗೊಂಡ ಸರ್ವಾಡ್ ನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಅಥಣಿ ತಾಲೂಕಿನ ಖವಟಕೊಪ್ಪ ಗ್ರಾಮದ ಮೂಲದ ದಂಪತಿ ಉದ್ಯೋಗದ ನಿಮಿತ್ತ ಕಟಗೇರಿ ಗ್ರಾಮದ ಆವಜೀಕರ ಮಠದಲ್ಲಿ ವಾಸವಾಗಿದ್ದರು. ಶೋಭಾ ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರೆ, ಪರ್ಗೊಂಡ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆರೋಪಿ, ಆಗಾಗ ಜಗಳವಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

The deceased has been identified as Shobha Pargonda Sarwad.
ಶಿವಮೊಗ್ಗ: ಹತ್ಯೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ

ಇದೇ ಅನುಮಾನದ ಹಿನ್ನೆಲೆಯಲ್ಲಿ ಶೋಭಾ ನಿದ್ರೆಯಲ್ಲಿದ್ದ ವೇಳೆ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ. ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಕಟಗೇರಿ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ಪಡೆದ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com