ಬೆಂಗಳೂರು: ನೀ ಹೀಗೆ ಮಾಡಬಾರದಿತ್ತು; ಪತ್ನಿಯನ್ನ ಕೊಂದು ಹಣೆಗೆ ಕುಂಕುಮವಿಟ್ಟು ಪತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ಪತಿಯೇ ಪತ್ನಿಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದಂಪತಿಗಳನ್ನು ಒಡಿಶಾ ಮೂಲದ ಮಂಜುಳಾ ಮತ್ತು ದೀಪಂತ್ ಎಂದು ತಿಳಿದುಬಂದಿದೆ.
Odisha couple
ಒಡಿಶಾ ದಂಪತಿ
Updated on

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ಪತಿಯೇ ಪತ್ನಿಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದಂಪತಿಗಳನ್ನು ಒಡಿಶಾ ಮೂಲದ ಮಂಜುಳಾ ಮತ್ತು ದೀಪಂತ್ ಎಂದು ತಿಳಿದುಬಂದಿದೆ.

ಬೊಮ್ಮಸಂದ್ರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೋಪಗೊಂಡ ದೀಪಂತ್, ಮಂಜುಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದಾಗಿ ಮಂಜುಳಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

Odisha couple
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಠಾಣಾಧಿಕಾರಿ ನಿಧನ

ಇನ್ನು ಪತ್ನಿ ಮೃತಪಟ್ಟ ನಂತರ ದೀಪಂತ್ ಆಕೆಯ ಶವದ ಮುಂದೆ ಕುಳಿತು ಕಣ್ಣೀರು ಹಾಕಿದ್ದಾದನೆ. ಅಲ್ಲದೆ ಪತ್ನಿಯ ಹಣೆಗೆ ಸಿಂಧೂರವಿಟ್ಟು ಡೆತ್‌ನೋಟ್ ಬರೆದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com