ಟಿ ನರಸೀಪುರದ ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್‌ಸಿ ಮಹದೇವಪ್ಪ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ರೇಷ್ಮೆ ಮಾರುಕಟ್ಟೆಗೆ ಬಳಸಲಾಗುತ್ತಿದ್ದ ಒಂದೂವರೆ ಎಕರೆ ಭೂಮಿಯನ್ನು ಉದ್ಯಾನವನದ ಅಭಿವೃದ್ಧಿಗಾಗಿ ಹಂಚಿಕೆ ಮಾಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು.
HC Mahadevappa
ಎಚ್ ಸಿ ಮಹದೇವಪ್ಪ
Updated on

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿರುವ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ ಸಚಿವ ಎಚ್‌ಸಿ ಮಹಾದೇವಪ್ಪ ಅವರು, ಈ ಬಗ್ಗೆ ಬಿಜೆಪಿ "ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ" ಎಂದು ಆರೋಪಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ರೇಷ್ಮೆ ಮಾರುಕಟ್ಟೆಗೆ ಬಳಸಲಾಗುತ್ತಿದ್ದ ಒಂದೂವರೆ ಎಕರೆ ಭೂಮಿಯನ್ನು ಉದ್ಯಾನವನದ ಅಭಿವೃದ್ಧಿಗಾಗಿ ಹಂಚಿಕೆ ಮಾಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಆದರೆ ಈಗ ಆ ಆದೇಶವನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಆ ಭೂಮಿಯಲ್ಲಿ ಕ್ರೀಡಾಂಗಣವನ್ನೂ ನಿರ್ಮಿಸುವುದಿಲ್ಲ. ನಮಗೆ ರೇಷ್ಮೆ ಕಾರ್ಖಾನೆ ಪ್ರಮುಖ ಆದ್ಯತೆಯಾಗಿದೆ. ಈ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ಹೀಗಾಗಿ ಕಾರ್ಮಿಕರು ಮತ್ತು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

HC Mahadevappa
ಮೈಸೂರು ರೇಷ್ಮೆ ಸೀರೆ ಖರೀದಿಗೆ ನಸುಕಿನ ಜಾವ 4 ಗಂಟೆಗೆ ಸಾಲಲ್ಲಿ ನಿಂತ ಮಹಿಳೆಯರು; Video

ರೇಷ್ಮೆ ಕಾರ್ಖಾನೆಯ ಬೆಳವಣಿಗೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಮತ್ತು ಈ ಘಟಕಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

"ಇದರಲ್ಲಿ ಯಾವುದೇ ಸಂದೇಹ ಬೇಡ. ಬಿಜೆಪಿ ರಾಜಕೀಯ ಕಾರಣಗಳಿಗಾಗಿ ಗೊಂದಲ ಸೃಷ್ಟಿಸಿದೆ" ಎಂದು ಸಚಿವರು ತಿಳಿಸಿದರು.

ಈ ಸಂಬಂಧ ಕ್ರೀಡಾ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ತೀರಾ ಅಗತ್ಯವೆಂದು ಕಂಡುಬಂದರೆ, ಆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾಪವನ್ನು ಕೈಬಿಡಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com