guarantee scheme: 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಬೇಕು': ಸಚಿವ ಎಂಬಿ ಪಾಟಿಲ್

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿದ್ದು, ಶ್ರೀಮಂತರು ಇವುಗಳ ಪ್ರಯೋಜನ ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಕರೆ ನೀಡಿದ್ದಾರೆ.
Congress' Guaranteed Annabhagya Yojana and Minister MB Patil
ಕಾಂಗ್ರೆಸ್ ನ ಗ್ಯಾರಂಟಿ ಅನ್ನಭಾಗ್ಯ ಯೋಜನೆ ಮತ್ತು ಸಚಿವ ಎಂಬಿ ಪಾಟೀಲ್
Updated on

ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ರೀಮಂತರು ಸ್ವಯಂ ಪ್ರೇರಿತರಾಗಿ ಕೈ ಬಿಡಬೇಕು ಎಂದು ಸಚಿವ ಎಂಬಿ ಪಾಟೀಲ್ ಮನವಿ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿದ್ದು, ಶ್ರೀಮಂತರು ಇವುಗಳ ಪ್ರಯೋಜನ ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಕರೆ ನೀಡಿದ್ದಾರೆ.

ವಿಜಯಪುರದ ಆಲಮಟ್ಟಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಈ ವೇಳೆ 'ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಒಂದು ಭಾಗ. ಇವು ಬಡವರಿಗಾಗಿ ಇರುವ ಯೋಜನೆಗಳಾಗಿವೆ. ಶ್ರೀಮಂತರು ಇವುಗಳನ್ನು ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು. ಈ ಯೋಜನೆಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಅಗತ್ಯವಾಗಿದ್ದು, ಅರ್ಹರು ಮಾತ್ರ ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಅಂತೆಯೇ 'ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ಅಭಿವೃದ್ಧಿಯ ಆಧಾರಸ್ತಂಭಗಳಾಗಿವೆ. ಆರ್ಥಿಕವಾಗಿ ಸದೃಢರಾದವರು, ಅರ್ಹ ಬಿಪಿಎಲ್ ಕುಟುಂಬದವರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳಲಿ. ಆದರೆ ತೆರಿಗೆ ಪಾವತಿದಾರರು ಈ ಸೌಲಭ್ಯಗಳಿಂದ ದೂರವಿರುವುದು ಉತ್ತಮ' ಎಂದು ಸಲಹೆ ನೀಡಿದರು.

Congress' Guaranteed Annabhagya Yojana and Minister MB Patil
Video: 'ಗ್ಯಾರಂಟಿ ಯೋಜನೆ' ಕೈ ಬಿಡಬೇಕು ಎಂದ ಗವಿಯಪ್ಪ; ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್!

ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುವುದಿಲ್ಲ

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ತಜ್ಞರಾಗಿದ್ದು, ಹಣಕಾಸಿನ ವ್ಯವಹಾರವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸಿನ ತಜ್ಞರಾಗಿದ್ದು, 16 ಬಜೆಟ್ ಕೊಟ್ಟಿದ್ದಾರೆ ಎಂದು ಎಂಬಿ ಪಾಟೀಲ್ ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com