ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಎಎಸ್ಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಬಳ್ಳಾಪುರ: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಎಎಸ್ಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಮೀನು ವಿವಾದ ಸಂಬಂಧ ಗಲಾಟೆ ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 1 ಲಕ್ಷ ರೂಪಾಯಿಗೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪ ಬೇಡಿಕೆ ಇಟ್ಟಿದ್ದರು. ಅದರಂತೆ ಕನ್ನಡ ಭವನದ ಸಮೀಪ ಮೊಟ್ಲೂರಿನ ರಘು ಅವರಿಂದ ಲಂಚ ಪಡೆಯುವಾಗ ಎಎಸ್ಐ ವೆಂಕಟೇಶಪ್ಪನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಪಿಎಸ್ಐ ಶರಣಪ್ಪ ಅವರನ್ನು ಬಂಧಿಸಲಾಗಿದೆ. ನಂತರ ಪಿಎಸ್ಐ ಮತ್ತು ಎಎಸ್ಐ ಅವರನ್ನು ಪ್ರತ್ಯೇಕ ವಿಚಾರಣೆಗೊಳಪಡಿಸಲಾಗಿದೆ.

ಸಾಂದರ್ಭಿಕ ಚಿತ್ರ
ಕಲಬುರಗಿ, ಬೆಳಗಾವಿ ಕೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com