ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಐವರು ದುರ್ಮರಣ; Video

ಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
car crashed into a container vehicle from behind.
ಕಂಟೇನರ್ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿರುವುದು.
Updated on

ಚಿತ್ತೂರು: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ನಡೆದಿದ್ದು, ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.

ಮೃತರನ್ನು ಮೋಹನ್‌ದಾಸ್ (71), ನಾಗರಾಜ್ (61) ಕುಸುಮಾ (61) ಜಯಂತಿ (59) ಪೂಜಾ (33) ಎಂದು ಗುರುತಿಸಲಾಗಿದೆ.

ಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ,

ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಗೆಯಲು ಹರಸಾಹಸಪಟ್ಟರು.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಅತಿವೇಗ ಹಾಗೂ ಚಾಲಕ ನಿದ್ರೆಗೆ ಜಾರಿದ್ದರಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

car crashed into a container vehicle from behind.
ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com