

ಬೀದರ್: ಬೀದರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಫೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುನಿಲ್ ತಾಪ್ಸೆ (58ವ) ಅವರು ಮಂಗಳವಾರ ತಮ್ಮ ಕ್ವಾರ್ಟರ್ಸ್ ನ ಕಿಟಕಿ ಗ್ರಿಲ್ಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪೊಲೀಸರ ಪ್ರಕಾರ, ಆರೋಗ್ಯ ಸಮಸ್ಯೆಗಳ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅನುಮಾನಿಸಲಾಗಿದೆ.
ತಾಪ್ಸೆ ಬರೆದಿದ್ದರೆಂದು ಹೇಳಲಾಗುತ್ತಿರುವ ಡೆತ್ ನೋಟ್ ನಲ್ಲಿ, ತನ್ನ ಸಾವಿಗೆ ಯಾರೂ ಕಾರಣರಲ್ಲ, ಆರೋಗ್ಯ ಸಮಸ್ಯೆಗಳ ಕಾರಣದಿಂದಲೇ ಈ ಕಠಿಣ ನಿರ್ಧಾರ ಕೈಗೊಂಡಿದ್ದೇನೆ ಎಂದು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮೂಲದ ತಾಪ್ಸೆ ಅವರನ್ನು ಸಹೋದ್ಯೋಗಿಗಳು ಮತ್ತು ಸಿಬ್ಬಂದಿ ಮೃದುಭಾಷಿ, ಸ್ನೇಹಪರ ವ್ಯಕ್ತಿ ಎಂದು ನೆನಪಿಸಿಕೊಂಡಿದ್ದಾರೆ. ತಮ್ಮ ವಿಭಾಗದಲ್ಲಿ ಅವರು ಉತ್ತಮ ಹೆಸರು ಗಳಿಸಿದ್ದರು ಎಂದು ಸಹೋದ್ಯೋಗಿಗಳು ಹೇಳುತ್ತಾರೆ.
Advertisement