ಬೇರೆಯವ್ರಿಗೆ ಬಜೆಟ್​ ಬೇಕು ನಮಗೆ​ ಬೇಡ, ನಮ್ಮ ಜಿಲ್ಲೆ ಕೆಲಸ ಬಜೆಟ್ ಮೇಲೆ ನಿಂತಿಲ್ಲ: ಡಿ.ಕೆ ಶಿವಕುಮಾರ್

ಇಡೀ ದೇಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಾತ್ರ ಒಂದು ಶಾಲೆಗೆ 15 ಕೋಟಿ ರೂ. ವೆಚ್ಚದಂತೆ 25 ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಬಜೆಟ್‌ನಲ್ಲಿ ಬರೆಸಿದ್ದೇವಾ?
DK Shivakumar, Siddaramaiah
ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ
Updated on

ಬೆಂಗಳೂರು: ನಮ್ಮ ಜಿಲ್ಲೆಯ ಕೆಲಸಗಳು ಬಜೆಟ್ ಮೇಲೆ ನಿಂತಿಲ್ಲ. ಬೇರೆಯವರಿಗೆ ಬಜೆಟ್ ಬೇಕಾಗಿರಬಹುದು, ನಮಗೆ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಮಾರ್ಚ್ 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ 2026-27 ರ ಬಜೆಟ್ ನಿಂದ ತಮ್ಮ ಜಿಲ್ಲೆಯ ಜನರು ಏನನ್ನು ನಿರೀಕ್ಷಿಸಬಹುದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಜೆಟ್ ನಿಂದ ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ. ಬಜೆಟ್ ಇದ್ದರೂ ಅಥವಾ ಇಲ್ಲದಿದ್ದರೂ, ನಾವು ನಮ್ಮ ಕೆಲಸವನ್ನು ಮಾಡುತ್ತಿದ್ದೇವೆಂದು ಹೇಳಿದರು.

ಇಡೀ ದೇಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಾತ್ರ ಒಂದು ಶಾಲೆಗೆ 15 ಕೋಟಿ ರೂ. ವೆಚ್ಚದಂತೆ 25 ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಬಜೆಟ್‌ನಲ್ಲಿ ಬರೆಸಿದ್ದೇವಾ? ಈ ಯೋಜನೆ ಸೃಷ್ಟಿಕರ್ತರು ನಾವೇ. ಇಡೀ ರಾಜ್ಯದಲ್ಲಿ ಈ ಯೋಜನೆ ವಿಸ್ತರಿಸಲು ಹೊಸ ನೀತಿ ರೂಪಿಸಿದ್ದೇವೆ.

DK Shivakumar, Siddaramaiah
ಹದಗೆಟ್ಟ ರಸ್ತೆಗಳಿಂದ ವರ್ಚಸ್ಸಿಗೆ ಧಕ್ಕೆ: ಬಜೆಟ್ ನಲ್ಲಿ ಪ್ರತಿ ಕ್ಷೇತ್ರಕ್ಕೆ 100 ಕೋಟಿ ಮೀಸಲಿಡಿ; ಕಾಂಗ್ರೆಸ್ ಶಾಸಕರ ಬೇಡಿಕೆಯಿಂದ ಒತ್ತಡದಲ್ಲಿ ಸಿದ್ದರಾಮಯ್ಯ!

ರಾಜ್ಯದೆಲ್ಲೆಡೆ 2 ಸಾವಿರ ಶಾಲೆಗಳ ನಿರ್ಮಾಣ ಮಾಡುವ ಗುರಿ ಇದೆ. ಬೇರೆಯವರಿಗೆ ಬಜೆಟ್ ಬೇಕಾಗುತ್ತದೆ. ನಮಗೆ ಬಜೆಟ್‌ನಲ್ಲಿ ಸೇರಿಸಿ ಕೆಲಸ ಮಾಡಬೇಕು ಎಂದೇನಿಲ್ಲ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರದಲ್ಲಿ ನಮ್ಮ ಕನಕಪುರಕ್ಕೆ ಮೆಡಿಕಲ್ ಕಾಲೇಜು ಸೇರಿಸಿದ್ದೆ, ಯಡಿಯೂರಪ್ಪ ಸರ್ಕಾರ ಬಂದ ನಂತರ ಅದನ್ನು ತೆಗೆದು ಚಿಕ್ಕಬಳ್ಳಾಪುರಕ್ಕೆ ಹಾಕಿದರು. ಈಗ ನಾವು ರಾಮನಗರ ಹಾಗೂ ಕನಕಪುರ ತಾಲ್ಲೂಕಿಗೂ ಮೆಡಿಕಲ್ ಕಾಲೇಜು ಕೊಟ್ಟಿದ್ದೇವೆ. ಈಗ ಚನ್ನಪಟ್ಟಣಕ್ಕೂ ಖಾಸಗಿ ಮೆಡಿಕಲ್ ಕಾಲೇಜು ನೀಡಿದ್ದೇವೆ. ಕನಕಪುರ ಹಾಗೂ ರಾಮನಗರ ಮಧ್ಯೆ ದಯಾನಂದ ಸಾಗರ್ ಮೆಡಿಕಲ್ ಕಾಲೇಜು ಇದೆ. ಮುಂದೆ ಮಾಗಡಿ ಕ್ಷೇತ್ರಕ್ಕೆ ಏನು ಮಾಡಬೇಕು ಎಂಬ ಅರಿವು ಇದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com