2026-27ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 17ನೇ ಬಾರಿಗೆ ಆಯವ್ಯಯ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್‌ ಮಂಡಿಸಿದ್ದರು. 1995 ಮತ್ತು 1996ರಲ್ಲಿ ದೇವೇಗೌಡರು ಸಿಎಂ ಆಗಿದ್ದಾಗ, 1997, 1998, 1999ರಲ್ಲಿ ಜೆ.ಎಚ್‌. ಪಟೇಲ್‌ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದ್ದರು.
CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 17ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್‌ ಮಂಡಿಸಿದ್ದರು. 1995 ಮತ್ತು 1996ರಲ್ಲಿ ದೇವೇಗೌಡರು ಸಿಎಂ ಆಗಿದ್ದಾಗ, 1997, 1998, 1999ರಲ್ಲಿ ಜೆ.ಎಚ್‌. ಪಟೇಲ್‌ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದ್ದರು.

2013ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು 2013, 2014, 2015, 2016, 2017 ಮತ್ತು 2018 (ಲೇಖಾನುದಾನ) ಹೀಗೆ ನಿರಂತರವಾಗಿ ಆರು ಬಾರಿ ಬಜೆಟ್‌ ಮಂಡಿಸಿದ್ದರು. 2018ರಲ್ಲಿ ಮಂಡಿಸಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಆಗಿರಲಿಲ್ಲ. ಇದು ಅವರು ಮಂಡಿಸಿದ 13ನೇ ಬಜೆಟ್‌ ಆಗಿತ್ತು.

2023ರಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು 14ನೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದರು. 2026-27ನೇ ಸಾಲಿನ 17ನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

CM Siddaramaiah
Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com