

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯದ ಆಯವ್ಯಯ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಹೇಳಿದರು.
ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ ರೂ. ತೆರಿಗೆ ಹೆಚ್ಚಳ. 2026-2027ನೇ ಸಾಲಿನಲ್ಲಿ 3.15 ಲಕ್ಷ ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಈ ಸಾಲಿನ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. 27,957 ಕೋಟಿ ರೂಪಾಯಿ ರಾಜಸ್ವ ಕೊರತೆ ಬಜೆಟ್ ಇದಾಗಿದೆ ಎಂದು ತಿಳಿಸಿದರು.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.
Advertisement