ಕರ್ನಾಟಕ ಬಜೆಟ್ 2026: 'ಗೃಹಲಕ್ಷ್ಮಿ'ಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ, 28 ಸಾವಿರ ಕೋಟಿ ಹಂಚಿಕೆ

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆರವಾಗುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಮುಂದುವರಿಸಲಾಗುವುದು.
CM Siddaramaiah-Gruha Lakshmi Scheme
ಸಿಎಂ ಸಿದ್ದರಾಮಯ್ಯ ಮತ್ತು ಗೃಹಲಕ್ಷ್ಮಿ ಯೋಜನೆ
Updated on

ಬೆಂಗಳೂರು: 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ 28 ಸಾವಿರ ಕೋಟಿ ರೂ ಹಂಚಿಕೆ ಮಾಡಿದ್ದಾರೆ.

ಹೌದು.. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಘೋಷಿಸಿದ್ದು, ಯೋಜನೆ ಅಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ನೆರವಾಗುವುದರ ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.

CM Siddaramaiah-Gruha Lakshmi Scheme
GST ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ, ಆದರೆ ರಾಜ್ಯಕ್ಕೆ ಅನುದಾನ ಕಡಿಮೆ: ಸಿಎಂ ಸಿದ್ದರಾಮಯ್ಯ

ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಗ್ಯಾರಂಟಿ ಮಹತ್ವದ ಪಾತ್ರ

ಅಂತೆಯೇ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು. ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com