Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್‌ ಪ್ರಾರಂಭ

ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್‌ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ.
Karnataka tourism
ಕರ್ನಾಟಕ ಪ್ರವಾಸೋದ್ಯಮ
Updated on

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2026-2027ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಈ ತಾಣಗಳಲ್ಲಿ Sea Plane ಹಾಗೂ Heli Taxi ಗಳ ಮುಖಾಂತರ ಸಂಪರ್ಕ ಕಲ್ಪಿಸುವುದರ ಜೊತೆಗೆ Joy Ride ಹಾಗೂ River Cruise ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು.

ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್‌ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ₹1 ಕೋಟಿ ಒದಗಿಸಲಾಗುವುದು. ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್‌ ಅನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.

Karnataka tourism
Karnataka Budget 2026: ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯ ಉನ್ನತೀಕರಣ; ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಿಕ್ಕಿದ್ದು ಮತ್ತೇನು?

  1. ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್‌ ಅಭಿವೃದ್ಧಿ.

  2. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ PPP ಮಾದರಿಯಲ್ಲಿ ರೋಪ್‌-ವೇ ನಿರ್ಮಾಣ

  3. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ₹10 ಕೋಟಿ ಒದಗಿಸಲಾಗುವುದು.

  4. ರಾಜ್ಯದ ಸಂರಕ್ಷಿತ 844 ಸ್ಮಾರಕಗಳು ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಹಿತದೃಷ್ಟಿಯಿಂದ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುವುದು ಹಾಗೂ ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರಿಸಲು ಕ್ರಮವಹಿಸಲಾಗುವುದು.

  5. ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ₹100 ಕೋಟಿ ವೆಚ್ಚದಲ್ಲಿ ಸಮಗ್ರ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ UNESCO ಸಹಮತಿ ಪಡೆದು ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com