

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2026-27ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅವರು ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಬೆಳಗ್ಗೆ 10:15 ರಿಂದ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎಂದು ಹೇಳಲಾಗುತ್ತಿದೆ.
ಈ ಪೈಕಿ ಗ್ಯಾರಂಟಿ ಯೋಜನೆಗಳ ಮುಂದುವರಿಕೆಗಾಗಿ ಶೇಕಡಾ 40ರಷ್ಟು ಹಣ ಮೀಸಲಿಡಲಿದ್ದು, ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಂದೇಶ ರವಾನೆ ಮಾಡಿ ಲೋಕಸಭಾ ವೋಟ್ ಬ್ಯಾಂಕ್ ಗ್ಯಾರಂಟಿ ಮಾಡಿಕೊಳ್ಳಲು ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement