ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರ 60 ರೂ. ಏರಿಕೆ, ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.
Congress Protest
ಕಾಂಗ್ರೆಸ್ ಪ್ರತಿಭಟನೆ
Updated on

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರವನ್ನು 60 ರೂ ಏರಿಕೆ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಸದಸ್ಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ. ಸಬ್ಸಿಡಿ ವ್ಯವಸ್ಥೆಯನ್ನು ಕ್ರಮೇಣ ಕಡಿಮೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸರ್ಕಾರ ಆರ್ಥಿಕ ಹೊರೆ ಹಾಕಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇತ್ತೀಚೆಗೆ ಅಮೆರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ನೀಡಿರುವ ಹೇಳಿಕೆಗಳು ಹಾಗೂ ಜಾಗತಿಕ ರಾಜಕೀಯ ಬೆಳವಣಿಗೆಗಳ ನಡುವೆ ಭಾರತದ ಹಿತಾಸಕ್ತಿಯನ್ನು ದೃಢವಾಗಿ ರಕ್ಷಿಸುವ ಬದಲು ಕೇಂದ್ರ ಸರ್ಕಾರ ಮೌನ ವಹಿಸಿರುವುದು ದೇಶದ ಗೌರವಕ್ಕೆ ಧಕ್ಕೆ ತರುವಂತಾಗಿದೆ ಎಂದು ಟೀಕಿಸಿದರು.

Congress Protest
ವಿಜಯಪುರ: ಪ್ರತಿಭಟನೆ ತಡೆಯಲು ಮುಂದಾದ PSI, ಪೇದೆಗೆ ಸ್ವಾಮೀಜಿ ಕಪಾಳಮೋಕ್ಷ, Video!

ವಿಶ್ವದ ಮುಂದೆ ಭಾರತದ ಸ್ವಾಭಿಮಾನವನ್ನು ರಕ್ಷಿಸುವ ಬಲವಾದ ರಾಜತಾಂತ್ರಿಕ ನಿಲುವು ತಾಳಬೇಕಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದುರ್ಬಲ ಧೋರಣೆ ತಾಳಿದೆ ಎಂದು ವಾಗ್ದಾಳಿ ನಡೆಸಿದರು.

ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಕಾಪಾಡುವ ದೃಷ್ಟಿಯಿಂದ ಎಲ್‌ಪಿಜಿ ದರ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ದೇಶದ ಹಿತಾಸಕ್ತಿಯನ್ನು ರಕ್ಷಿಸುವ ಸ್ಪಷ್ಟ ಮತ್ತು ದೃಢ ನೀತಿಗಳನ್ನು ಜಾರಿಗೆ ತರಬೇಕು. ಇಲ್ಲವಾದರೆ ಜನರ ಆಕ್ರೋಶವನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ಧರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com