

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ,
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ಬಜೆಟ್ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ಅಭಿವೃದ್ಧಿಯ ಮಂತ್ರ, ಸಮೃದ್ಧಿಯ ಗುರಿ. ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ ₹4.48 ಲಕ್ಷ ಕೋಟಿ ಮೊತ್ತದ 2026-2027 ಸಾಲಿನ ಬೃಹತ್ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡುವ ಜೊತೆಗೆ, ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಲಿ ಎಂಬ ಆಶಯ ನಮ್ಮದು ಎಂದಿದ್ದಾರೆ.
Advertisement