ಸಾಲವಿಲ್ಲದೆ ಯಾವುದೇ ದೇಶ-ರಾಜ್ಯದ ಅಭಿವೃದ್ಧಿ ಸಾಧ್ಯವೇ ಇಲ್ಲ, ಟೀಕಿಸೋ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕೇಂದ್ರದಿಂದ ರಾಜ್ಯಕ್ಕೆ ನೀಡಬೇಕಾದ ಅನುದಾನ ಸಂಪೂರ್ಣವಾಗಿ ಬಂದಿದ್ದರೆ ರಾಜ್ಯದಲ್ಲಿ ಆದಾಯ ಕೊರತೆ ಉಂಟಾಗುತ್ತಿರಲಿಲ್ಲ. ಟೀಕೆ ಮಾಡುವುದು ಸುಲಭ, ಹೀಗಾಗಿ ನಮ್ಮನ್ನು ಪ್ರಶ್ನಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ.
CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದು, ಈ ಮೂಲಕ ಬಜೆಟ್‌ನಲ್ಲಿ ಸಾಲದ ಹೆಚ್ಚಳ ಕುರಿತು ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಲದ ಮಿತಿಯನ್ನು ಕರ್ನಾಟಕ ಹಣಕಾಸಿನ ಜವಾಬ್ದಾರಿ ಕಾಯ್ದೆ (ಕೆಎಫ್‌ಆರ್‌ಎ) ನಿಯಮಗಳೊಳಗೆ ಇಟ್ಟುಕೊಂಡೇ ಬಜೆಟ್ ಮಂಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು ಸುಮಾರು 165 ಲಕ್ಷ ಕೋಟಿ ರೂ. ಆಗಿದೆ. ಈ ವರ್ಷದ ಕೇಂದ್ರ ಸರ್ಕಾರದ ಹಣಕಾಸು ಕೊರತೆ ಶೇ.4.4 ಆಗಿದ್ದು, ಒಟ್ಟು ಸಾಲ 218 ಲಕ್ಷ ಕೋಟಿ ರೂ. ಆಗಿದೆ ಎಂದು ಹೇಳಿದರು.

2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಸಾಲ 53.11 ಲಕ್ಷ ಕೋಟಿ ರೂ. ಇತ್ತು. ಈಗ ಅದು 165 ಲಕ್ಷ ಕೋಟಿ ರೂ. ಆಗಿದೆ. “ಕೇಂದ್ರದಿಂದ ರಾಜ್ಯಕ್ಕೆ ನೀಡಬೇಕಾದ ಅನುದಾನ ಸಂಪೂರ್ಣವಾಗಿ ಬಂದಿದ್ದರೆ ರಾಜ್ಯದಲ್ಲಿ ಆದಾಯ ಕೊರತೆ ಉಂಟಾಗುತ್ತಿರಲಿಲ್ಲ. ಟೀಕೆ ಮಾಡುವುದು ಸುಲಭ, ಹೀಗಾಗಿ ನಮ್ಮನ್ನು ಪ್ರಶ್ನಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಒಟ್ಟು ಸಾಲ 55,33,847 ಕೋಟಿ ರೂ. ಇತ್ತು ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದ ಆರ್ಥಿಕ ಪ್ರಗತಿಯನ್ನು ಉಲ್ಲೇಖಿಸಿದ ಅವರು, 2025–26ರಲ್ಲಿ ಕರ್ನಾಟಕದ GSDP ವೃದ್ಧಿ ದರ ಶೇ.8.1 ಆಗಿದ್ದು, ದೇಶದ GDP ವೃದ್ಧಿದರ ಶೇ.7.4 ಕ್ಕಿಂತ ಹೆಚ್ಚಾಗಿದೆ.

CM Siddaramaiah
Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ; ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ. ಮೀಸಲಿಡಲಾಗಿದ್ದು, ಇದುವರೆಗೆ ಒಟ್ಟು 1,21,591 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ಇದೇ ವೇಳೆ ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾದ 30,880 ಕೋಟಿ ರೂ. ಕೇಂದ್ರದ ಪಾಲಿನಲ್ಲಿ ಕೇವಲ 11,786 ಕೋಟಿ ರೂ. ಮಾತ್ರ ಬಂದಿದೆ ಎಂದು ಅವರು ಆರೋಪಿಸಿದರು. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಖರ್ಚು ಮಾಡುತ್ತಿದೆ ಎಂದು ಹೇಳಿದರು.

ಈ ವರ್ಷ 56,432 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿರುವ ಸಿಎಂ, ನೇಮಕಾತಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲಾಗಿದೆ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಸಂದರ್ಭದಲ್ಲಿ ಮುಳುಗಡೆಯಾಗುವ ಭೂಮಿಯ ಮಾಲೀಕರಿಗೆ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.

ತುಂಗಭಧ್ರಾ ಅಣೆಕಟ್ಟಿನ 33 ಗೇಟ್‌ಗಳು ಹಾಳಾಗಿರುವುದರಿಂದ ಜೂನ್ ಒಳಗೆ ಎಲ್ಲ ಗೇಟ್‌ಗಳನ್ನು ಬದಲಾಯಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

18ನೇ ಬಜೆಟ್ ಮಂಡನೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು

ಇದೇ ವೇಳೆ 2027–28ರ ಸಾಲಿನ 18ನೇ ಬಜೆಟ್ ಮಂಡಿಸುವುದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಮೇಲೆ ನಿಂತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಪಕ್ಷದ ನಾಯಕತ್ವ ಬದಲಾವಣೆ ಕುರಿತು ಅಂತಿಮ ತೀರ್ಮಾನವಾಗುವವರೆಗೆ ಬಜೆಟ್ ಮಂಡನೆ ಮುಂದುವರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com