ಲಾರಿಗೆ ಕಾರು ಡಿಕ್ಕಿ: ಬೆಂಗಳೂರು ಸಮೀಪ ಭೀಕರ ಅಪಘಾತಕ್ಕೆ ಮೂವರು ಯುವಕರು ಸಾವು

ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
Accident near Agara cross in Bengaluru
ಬೆಂಗಳೂರು ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ
Updated on

ಬೆಂಗಳೂರು: ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com