ಕೇಂದ್ರ ಸರ್ಕಾರ ಟ್ರಂಪ್‌ನ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಚಿವ ಡಾ.ಎಂ.ಸಿ. ಸುಧಾಕರ್

ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಕೊಂಡಿದೆ.
Higher Education Minister Dr M C Sudhakar
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್
Updated on

ಧಾರವಾಡ: ಕೇಂದ್ರ ಸರ್ಕಾರವು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ಧಾರವಾಡದಲ್ಲಿ ನಡೆದ ಹೊಸದಾಗಿ ನೇಮಕಗೊಂಡ ಪ್ರಾಂಶುಪಾಲರ ಆಡಳಿತಾತ್ಮಕ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರಂಪ್ ಸೂಚನೆಗಳಿಗೆ ಅನುಗುಣವಾಗಿ ಏಕೆ ಕೇಂದ್ರ ಸರ್ಕಾರ ಏಕೆ ನಡೆದುಕೊಳ್ಳುತ್ತಿದೆ ಎಂಬ ಪ್ರಶ್ನೆ ಮಾಡಿದ್ದಾರೆ.

ಇತ್ತೀಚೆಗೆ ಮಂಡನೆಯಾದ ರಾಜ್ಯ ಬಜೆಟ್ ಕುರಿತು ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ದೇವಾಲಯಗಳಿಗೆ ಎಷ್ಟು ಹಣ ಮೀಸಲಿಟ್ಟಿದ್ದರು ಎಂಬುದನ್ನು ವಿವರಿಸಬೇಕು ಎಂದು ಸವಾಲು ಹಾಕಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಯೋಜನೆಗಳು ಯಾವುದೇ ಒಂದು ಸಮುದಾಯಕ್ಕೆ ಮಾತ್ರವಲ್ಲ, ಸಮಾಜದ ಎಲ್ಲಾ ವರ್ಗಗಳಿಗೆ ಪ್ರಯೋಜನವಾಗುವಂತೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Higher Education Minister Dr M C Sudhakar
ಬಿಜೆಪಿ ಸರ್ಕಾರದ ಬಿಲ್ ಬಾಕಿಗೆ ನಮ್ಮ ಎದೆಮೇಲೆ ಕೂತಿದ್ದೀರಿ: ಗುತ್ತಿಗೆದಾರರ ಪ್ರತಿಭಟನೆಗೆ ಡಿಕೆಶಿ ಗರಂ!

ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಕೊಂಡಿದೆ ಎಂದು ಹೇಳಿದರು.

ರಾಜ್ಯದ ಬಜೆಟ್ ಸುಮಾರು ರೂ.5 ಲಕ್ಷ ಕೋಟಿ ಆಗಿದ್ದು, ಇದು ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಮಂಡಿಸಿದ ಬಜೆಟ್‌ಗಳಂತೆ ಚುನಾವಣಾ ಆಧಾರಿತ ಬಜೆಟ್ ಅಲ್ಲ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರ ದೇಶದ ಸಾಲವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ ಎಂದು ಆರೋಪಿಸಿದ ಅವರು, ಕಳೆದ 11 ವರ್ಷಗಳಲ್ಲಿ ರಾಷ್ಟ್ರದ ಸಾಲವು ಸುಮಾರು ರೂ.58 ಲಕ್ಷ ಕೋಟಿಯಿಂದ ರೂ.218 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಹೇಳಿದರು.

ಈ ಎಲ್ಲ ಬೆಳವಣಿಗೆಗಳನ್ನು ಜನತೆ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ತಮ್ಮ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com