

ಬೆಂಗಳೂರು: ನಗರದ ಜಯಮಹಲ್ 1ನೇ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಹಾಗೂ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.
ಮಾಹಿತಿಯ ಪ್ರಕಾರ, ವೇಗವಾಗಿ ಬಂದ ಇನೋವಾ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಅದನ್ನು ಕೆಲವು ದೂರ ರಸ್ತೆ ಮೇಲೆ ಎಳೆದೊಯ್ದಿದೆ.
ಡಿಕ್ಕಿಯ ಪರಿಣಾಮ ಬೈಕ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಕಾರು ಚಾಲಕ ಕೆಲ ದೂರದವರೆಗೂ ಬೈಕ್'ನ್ನು ಎಳೆದುಕೊಂಡು ಹೋಗಿದ್ದಾನೆ.
ಈ ವೇಳೆ ಬೈಕ್‌ನಿಂದ ಪೆಟ್ರೋಲ್ ಸೋರಿಕೆಯಾಗಿದ್ದು, ರಸ್ತೆ ಮೇಲೆ ಎಳೆಯುವ ವೇಳೆ ಉಂಟಾದ ಘರ್ಷಣೆ ಹಾಗೂ ಹಾನಿಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಕಾರಿಗೂ ತಗುಲಿದೆ. ಸ್ಥಳದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿ ಕೆಲದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿದೆ.
ಅಪಘಾತದ ವೇಳೆ ಬೈಕ್ ನಲ್ಲಿದ್ದ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗುತ್ತಿದ್ದು, ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ ಇತರರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಚಾಲಕನ ಪತ್ತೆಗಾಗಿ ಪೊಲೀಸರ ತೀವ್ರ ಶೋಧ ಮುಂದುವರಿದಿದೆ.
ಅಪಘಾತ ಸಂಭವಿಸಿದ ವೇಳೆ ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
Advertisement