ಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ

ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
Mallikarjuna Muthya
ಮಲ್ಲಿಕಾರ್ಜುನ ಮುತ್ಯಾ
Updated on

ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದೆ.

ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗುವ ಮೊದಲೇ ಅಜ್ಞಾತ ಸ್ಥಳದಿಂದಲೇ, ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಏಕಾಏಕಿ ಹೈಕೋರ್ಟ್​​ನಿಂದ ಅರ್ಜಿ ವಾಪಸ್ ಪಡೆದುಕೊಂಡು ಬಳಿಕ ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು.

Mallikarjuna Muthya
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನ ಭೀತಿ ಎದುರಿಸುತ್ತಿರುವ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಮೂರ್ನಾಲ್ಕು ದಿನದ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.ಈ ಪ್ರಕರಣದ ತನಿಖಾಧಿಕಾರಿಯಾಗಿರುವ ಶಹಪೂರ ಸಿಪಿಐ ಶರಣಗೌಡ ನಾಮಣ್ಣವರ ಅವರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಮಲ್ಲಿಕಾರ್ಜುನ ಮುತ್ಯಾನನ್ನು ಮೊದಲ ಹಂತದ ವಿಚಾರಣೆ ಅವರ ನಾಲ್ಕು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com